ಮಡಿಕೇರಿ, ಡಿ. ೩೦: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ತಾ. ೩೧ ರಂದು (ಇಂದು) ಮಧ್ಯಾಹ್ನ ೨.೩೦ ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಕಾವೇರಿ ಬ್ಲಾಕ್ನ ಲೆಕ್ಚರ್ ಹಾಲ್ನಲ್ಲಿ ಗ್ರಂಥಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಸಾಹಿತಿಗಳು ಮತ್ತು ಚಿಂತಕರಾದ ಅರವಿಂದ ಚೊಕ್ಕಾಡಿ ಉದ್ಘಾಟಿಸಲಿ ದ್ದಾರೆ. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಶಸûçಚಿಕಿತ್ಸಕರು ಮತ್ತು ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ಡಾ. ನಂಜುAಡೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿವಾಸಿ ವೈದ್ಯಕೀಯ ಅಧಿಕಾರಿ ಡಾ. ರೂಪೇಶ್ ಗೋಪಾಲ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಕುಶ್ವಂತ್ ಕೋಳಿಬೈಲು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಎಸ್. ಮಂಜುನಾಥ್ ಇತರರು ಪಾಲ್ಗೊಳ್ಳಲಿದ್ದಾರೆ.