ಮಡಿಕೇರಿ, ಡಿ. ೩೦: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಜನವರಿ ೧ ರಂದು ಬೆಳಿಗ್ಗೆ ೧೦ ಗಂಟೆಗೆ ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಲಯದಲ್ಲಿ ಉಪನ್ಯಾಸಕರಿಗೆ ಕೊಡವ ಭಾಷಾ ಕಲಿಕೆಯ ಕಾರ್ಯಾಗಾರ ನಡೆಯಲಿದೆ.
ಕಾರ್ಯಾಗಾರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಪೊನ್ನಂಪೇಟೆ ಅಪ್ಪಚ್ಚಕವಿ ವಿದ್ಯಾಲಯದ ಅಧ್ಯಕ್ಷ ಮಂಡೆಚAಡ ದಿನೇಶ್ ಚಿಟ್ಟಿಯಪ್ಪ, ಜಿ.ಪಂ. ಮಾಜಿ ಸದಸ್ಯರು ಹಾಗೂ ಅಖಿಲ ಅಮ್ಮಕೊಡವ ಸಮಾಜದ ಅಧ್ಯಕ್ಷ ಬಾನಂಡ ಎನ್.ಪ್ರಥ್ವಿ, ಸಮಾಜ ಸೇವಕ ಮಾಚಿಮಾಡ ರವೀಂದ್ರ ಅವರು ಪಾಲ್ಗೊಳ್ಳಲಿದ್ದಾರೆ.
ಬಾಚರಣಿಯಂಡ ಪಿ.ಅಪ್ಪಣ್ಣ, ನಾಗೇಶ್ ಕಾಲೂರು, ಕಾಳಿಮಾಡ ಮೋಟಯ್ಯ, ಡಾ. ಮುಲ್ಲೇಂಗಡ ರೇವತಿ ಪೂವಯ್ಯ, ಕಾರ್ಯಾಗಾರದಲ್ಲಿ ಭಾಗವಹಿಸುವ ಉಪನ್ಯಾಸಕರಿಗೆ ತರಬೇತಿ ನೀಡಲಿದ್ದಾರೆ. ಪಡಿಞರಂಡ ಪ್ರಭುಕುಮಾರ್ ಅವರು ಸಂಚಾಲಕ ರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.