ಮಡಿಕೇರಿ, ಡಿ. ೩೦: ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವಿಶ್ವಮಾನವ ಉದ್ಯಾನವನದಲ್ಲಿ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಯಿತು.

ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ್ ಕಾಮತ್ ಹಾಗೂ ಮಾಜಿ ನಗರಸಭೆ ಸದಸ್ಯ ಕೆ.ಟಿ. ಬೇಬಿ ಮ್ಯಾಥ್ಯು ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಮುನೀರ್ ಅಹಮದ್ ಅವರು ಕುವೆಂಪು ಅವರ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರವಿ ಗೌಡ, ಉಪಾಧ್ಯಕ್ಷ ನಾಗೇಶ್, ಮಡಿಕೇರಿ ನಗರ ಅಧ್ಯಕ್ಷ ದೇವೋಜಿ, ಮಹಿಳಾ ಘಟಕದ ಅಧ್ಯಕ್ಷ ಮೀನಾಜ್ ಪ್ರವೀಣ್, ಲೇಖಕರು ಹಾಗೂ ಕಲಾವಿದರ ಬಳಗದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು.