ಇಂದು ಕರ್ನಾಟಕ ಬಂದ್ ಇಲ್ಲ
ಬೆಂಗಳೂರು, ಡಿ. ೩೦: ಮಹಾರಾಷ್ಟç ಏಕೀಕರಣ ಸಮಿತಿ ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊAದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ಬಂದ್ ಕೈಬಿಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಮುಖಂಡರು ಬಂದ್ ಆಚರಣೆಯನ್ನು ಹಿಂಪಡೆದಿದ್ದು, ಮತ್ತೊಂದು ದಿನಾಂಕ ನಿಗದಿ ಪಡಿಸಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಬಂದ್ ವಾಪಸ್ ಪಡೆಯಲು ವಾಟಾಳ್ ನಾಗರಾಜ್ ಮತ್ತು ಸಾ.ರಾ. ಗೋವಿಂದ್ ಸ್ಪಂದಿಸಿದ್ದು, ಅವರಿಗೆ ಧನ್ಯವಾದಗಳು ಎಂದರು. ವಾಟಾಳ್ ನಾಗರಾಜ್ ಮಾತನಾಡಿ, ಸಿಎಂ ಮನವಿ ಮೇರೆಗೆ ನಾವೆಲ್ಲಾ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಹೊಸ ವರ್ಷಕ್ಕೆ ತೊಂದರೆಯಾಗಲಿದೆ. ಅದು ಸರಿಯಲ್ಲ ಎಂಬುದಾಗಿ ನಿರ್ಧಾರ ತೆಗೆದುಕೊಂಡಿದ್ದು, ಬಂದ್ ಮುಂದೂಡಲಾಗಿದೆ ಎಂದು ತಿಳಿಸಿದರು. ಜನವರಿ ೨೨ ರಂದು ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.
ರಾಜ್ಯದಲ್ಲಿ ಏರುತ್ತಿದೆ ಕೋವಿಡ್: ೭೦೭ ಮಂದಿಗೆ ಪಾಸಿಟಿವ್
ಬೆಂಗಳೂರು, ಡಿ. ೩೦: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಎರಡನೇ ದಿನವೂ ಏರಿಕೆ ಮುಂದುವರೆದಿದ್ದು, ಕಳೆದ ೨೪ ಗಂಟೆಯಲ್ಲಿ ೭೦೭ ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೩೦,೦೬೫,೦೫ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾದಿಂದ ೩ ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ೩೮,೩೨೭ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಕೋವಿಡ್-೧೯ ಸೋಂಕಿತರ ಸಂಖ್ಯೆ ೫೦೦ನ್ನು ದಾಟಿದ್ದು ೫೬೫ ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೬೨,೯೬೨ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಕೊರೊನಾದಿಂದ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ೨೫೨ ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೯,೫೯,೯೨೬ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳು ೮೨೨೩ಕ್ಕೆ ಏರಿಕೆಯಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ೧೧೩ ರನ್ಗಳ ಐತಿಹಾಸಿಕ ಜಯ
ಸೆಂಚುರಿಯನ್, ಡಿ. ೩೦: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ೧೧೩ ರನ್ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ೧-೦ ಮುನ್ನಡೆ ಸಾಧಿಸಿದೆ. ಸೆಂಚುರಿಯನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ ೩೦೫ ರನ್ಗಳ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ ೧೯೧ ರನ್ಗಳಿಗೆ ಆಲೌಟ್ ಆಗಿ ಭಾರತದ ಎದುರು ೧೧೩ ರನ್ಗಳ ಅಂತರದಲ್ಲಿ ಸೋಲು ಕಂಡಿತು. ಭಾರತ ನೀಡಿದ್ದ ೩೦೫ ರನ್ಗಳ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರತೀಯ ಬೌಲರ್ಗಳು ಅಕ್ಷರಶಃ ಕಾಡಿದರು. ಡೀನ್ ಎಲ್ಗಾರ್ (೭೭ರನ್) ಅವರ ಅರ್ಧಶತಕ ಮತ್ತು ಟೆಂಬಾ ಬವುಮಾ (೩೬ ರನ್) ಸಮಯೋಚಿತ ಪ್ರದರ್ಶನದ ಹೊರತಾಗಿಯೂ ದಕ್ಷಿಣ ಆಫ್ರಿಕಾ ತಂಡ ಪಂದ್ಯವನ್ನು ಕೈ ಚೆಲ್ಲಿತು. ಪ್ರಮುಖವಾಗಿ ಭಾರತ ಮಹಮದ್ ಶಮಿ ಮತ್ತು ಜಸ್ ಪ್ರೀತ್ ಬುಮ್ರಾ ಆಫ್ರಿಕನ್ನರನ್ನು ಇನ್ನಿಲ್ಲದಂತೆ ಕಾಡಿದರು. ಇಬ್ಬರೂ ಬೌಲರ್ಗಳು ತಲಾ ೩ ವಿಕೆಟ್ ಪಡೆದರೆ, ಅಂತಿಮ ದಿನದ ಹೀರೋ ಆರ್. ಅಶ್ವಿನ್ ಅಂತಿಮ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ೨ ವಿಕೆಟ್ ಪಡೆದು ಆಫ್ರಿಕಾ ಇನ್ನಿಂಗ್ಸ್ಗೆ ತೆರೆಎಳೆದು, ಭಾರತಕ್ಕೆ ಗೆಲುವು ತಂದುಕೊಟ್ಟರು.
ದೇಶದಲ್ಲಿ ಕೊರೊನಾ ಹೆಚ್ಚಳ: ಎಂಟು ರಾಜ್ಯಗಳಿಗೆ ಕೇಂದ್ರ ಸೂಚನೆ
ನವದೆಹಲಿ, ಡಿ. ೩೦: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆ ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸುವಂತೆ ಮತ್ತು ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಎಂಟು ರಾಜ್ಯಗಳಿಗೆ ಸೂಚಿಸಿದೆ. ಈ ಸಂಬAಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೆಹಲಿ, ಹರಿಯಾಣ, ತಮಿಳು ನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟç, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್ಗೆ ಪತ್ರ ಬರೆದಿದ್ದು, ಕೋವಿಡ್-೧೯ ಪರೀಕ್ಷೆಯನ್ನು ಹೆಚ್ಚಿಸಲು, ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸಲು, ವ್ಯಾಕ್ಸಿನೇಷನ್ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ದೇಶಾದ್ಯಂತ ಕೋವಿಡ್-೧೯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ೧೩,೧೫೪ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ವರದಿ ಯಾಗಿದ್ದು, ಒಂದೇ ದಿನ ೧೮೦ ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ೯೬೧ಕ್ಕೆ ಏರಿಕೆಯಾಗಿದೆ.
ಚೀನಾ ಜೆ-೧೦ ಸಿ ಜೆಟ್ ಖರೀದಿಸಿದ ಪಾಕಿಸ್ತಾನ!
ಇಸ್ಲಾಮಾಬಾದ್, ಡಿ. ೩೦: ಭಾರತ ತನ್ನ ವಾಯುಪಡೆ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದಕ್ಕೆ ರಾಫೆಲ್ ಜೆಟ್ಗಳನ್ನು ಖರೀದಿಸಿತ್ತು. ಈಗ ನೆರೆ ರಾಷ್ಟç ಪಾಕಿಸ್ತಾನ ಇದಕ್ಕೆ ಪ್ರತಿಸ್ಪರ್ಧಿಯಾಗಿ ತನ್ನ ಸಾರ್ವಕಾಲಿಕ ಪರಮಾಪ್ತ ಗೆಳೆಯ ಚೀನಾದಿಂದ ಜೆ-೧೦ ಸಿ ಜೆಟ್ನ್ನು ಖರೀದಿಸಿದೆ. ಈ ಮಾಹಿತಿಯನ್ನು ಪಾಕ್ನ ಆಂತರಿಕ ಸಚಿವ ಶೇಖ್ ರಶೀದ್ ಅಹ್ಮದ್ ಬಹಿರಂಗಪಡಿಸಿದ್ದು, ಎಲ್ಲಾ ಋತುಗಳಲ್ಲೂ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಜೆ-೧೦ ಸಿ ಜೆಟ್ಗಳ ಒಂದು ಪೂರ್ಣ ಸ್ಕಾ÷್ವಡ್ರನ್ನ್ನು ಪಾಕಿಸ್ತಾನ ಚೀನಾದಿಂದ ಖರೀದಿಸಿದೆ, ಇದು ೨೦೨೨ ರ ಮಾ. ೨೩ ರಂದು ನಡೆಯಲಿರುವ ಪಾಕಿಸ್ತಾನ ದಿನಾಚರಣೆಯಲ್ಲಿ ಭಾಗಿಯಾಗಲಿದೆ ಎಂದು ತಿಳಿಸಿದ್ದಾರೆ. ಚೀನಾ ತನ್ನ ಪರಮಾಪ್ತ ಮಿತ್ರನ ರಕ್ಷಣೆಗಾಗಿ ಜೆ-೧೦ ಸಿ ಜೆಟ್ಗಳನ್ನು ನೀಡಿದ್ದು, ಇವು ಚೀನಾದ ಅತ್ಯಾಧುನಿಕ ಜೆಟ್ಗಳಾಗಿವೆ. ವಿಐಪಿ ಗಣ್ಯರು ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಆಗಮಿಸುತ್ತಿದ್ದಾರೆ. ಪಾಕಿಸ್ತಾನ ವಾಯುಪಡೆಯಿಂದ ಜೆ-೧೦ ಸಿ ಪ್ರದರ್ಶನ ನಡೆಯಲಿದ್ದು ರಾಫೆಲ್ ಜೆಟ್ಗಳಿಗೆ ಪ್ರತಿಸ್ಪರ್ಧಿಯಾಗಿ ಇವುಗಳನ್ನು ನಿಯೋಜನೆ ಮಾಡಲಾಗುತ್ತದೆ ಎಂದು ರಶೀದ್ ಹೇಳಿದ್ದಾರೆ.
ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ: ಕಾಳಿಚರಣ್ ಮಹಾರಾಜ್ ಬಂಧನ
ರಾಯ್ಪುರ, ಡಿ. ೩೦: ರಾಷ್ಟçಪಿತ ಮಹಾತ್ಮಾ ಗಾಂಧಿ ಕುರಿತಾಗಿ ನಿಂದನಾತ್ಮಕ ಹೇಳಿಕೆ ನೀಡಿದ್ದ ಕಾಳಿಚರಣ್ ಮಹಾರಾಜ್ ಅವರನ್ನು ರಾಯ್ಪುರ ಪೊಲೀಸರು ಬಂಧಿಸಿದ್ದಾರೆ. ಖಜುರಾಹೋದಲ್ಲಿದ್ದ ಕಾಳಿಚರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು. ರಾಯ್ಪುರ ಮಾಜಿ ಮೇಯರ್ ಪ್ರಮೋದ್ ದುಬೆ ನೀಡಿದ್ದ ದೂರು ಆಧರಿಸಿ ತಿಕ್ರಪಾರಾ ಠಾಣೆ ಪೊಲೀಸರು ಕಾಳಿ ಚರಣ್ ವಿರುದ್ಧ ಐಪಿಸಿ ಸೆಕ್ಷನ್ ೫೦೫ (೨) ೨೯೪ ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದರು. ರಾಯ್ಪುರ ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಾಳಿಚರಣ್ ಮಹಾರಾಜ್ ಚತ್ತೀಸ್ಘಡದಿಂದ ನಾಪತ್ತೆಯಾಗಿದ್ದರು ಎಂದು ವರದಿಯಾಗಿದೆ. ಆರೋಪಿ ಕಾಳಿಚರಣ್ನನ್ನು ಬಂಧಿಸಲು ಪೊಲೀಸರು ಮಹಾರಾಷ್ಟç ಹಾಗೂ ಮಧ್ಯಪ್ರದೇಶ ರಾಜ್ಯಗಳಿಗೆ ವಿಶೇಷ ತಂಡಗಳನ್ನು ಕಳುಹಿಸಲಾಗಿತ್ತು ಎಂದು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮೇಲುಗೈ
ಬೆಂಗಳೂರು, ಡಿ. ೩೦: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಜೆಡಿಎಸ್ ಕೂಡ ಗಮನಾರ್ಹ ಸಾಧನೆ ಮಾಡಿದೆ. ಪಟ್ಟಣ ಪಂಚಾಯಿತಿಯ ಒಟ್ಟು ೫೭೭ ಸ್ಥಾನಗಳ ಪೈಕಿ ಕಾಂಗ್ರೆಸ್ ೨೩೬ ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ ೧೯೪ ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಜೆಡಿಎಸ್ ಪಕ್ಷ ೧೨ ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಪುರಸಭೆಯ ಒಟ್ಟು ೪೪೧ ಸ್ಥಾನಗಳ ಪೈಕಿ ಕಾಂಗ್ರೆಸ್ ೨೦೧ ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ ೧೭೬ ಸ್ಥಾನಗಳಲ್ಲಿ ಜಯಗಳಿಸಿದ್ದರೆ ಜೆಡಿಎಸ್ ೪೩ ಸ್ಥಾನಗಳನ್ನು ಗಳಿಸಿಕೊಂಡಿದೆ. ಆದರೆ ನಗರಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಒಟ್ಟು ೧೬೬ ಸ್ಥಾನಗಳ ಪೈಕಿ ಕಾಂಗ್ರೆಸ್ ೬೧ ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಬಿಜೆಪಿ ೬೭ ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ೧೨ ಮತ್ತು ಇತರರು ೨೬ ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.