ಮಡಿಕೇರಿ, ಡಿ. ೩೦: ನಗರಸಭೆಯಿಂದ ಅನುಮತಿ ಪಡೆಯದೆ; ಮಾಸ್ಕ್ ಧರಿಸದೆ ಕೊರೊನಾ ನಿಯಮ ಉಲ್ಲಂಘಿಸಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗೆ ದಂಡ ವಿಧಿಸಿ ಅಂಗಡಿಯನ್ನು ತೆರವುಗೊಳಿಸಿದ ಘಟನೆ ನಡೆದಿದೆ.
ನಗರದ ಚೌಕಿ ವೃತ್ತದ ಬಳಿ ರಸ್ತೆ ಬದಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ರಾಣಿಪೇಟೆಯ ಫೈಜು ಎಂಬ ವ್ಯಾಪಾರಿ ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದನ್ನು ಗಮನಿಸಿದ ನಗರ ವೃತ್ತ ನಿರೀಕ್ಷಕ ವೆಂಕಟೇಶ್ ಅವರು ಕೊರೊನಾ ನಿಯಮದಂತೆ ಮಾಸ್ಕ್ ಧರಿಸಲು ಸೂಚಿಸಿದರೂ ಕೂಡ ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿ ಸೂಚನೆಯನ್ನು ಉಲ್ಲಂಘಿಸಿ ಆ ವ್ಯಾಪಾರಿ ತನ್ನ ವ್ಯಾಪಾರವನ್ನು ಮುಂದುವರಿಸಿದ್ದರಿAದ ಪೊಲೀಸರು ದಂಡ ವಿಧಿಸಿದ್ದಲ್ಲದೆ, ನಗರಸಭೆಗೂ ಮಾಹಿತಿ ನೀಡಿದ್ದಾರೆ.
ಬಳಿಕ ನಗರಸಭೆ ಅಧಿಕಾರಿಗಳು ಬಂದು ಪರಿಶೀಲಿಸಿದಾಗ ಆ ವ್ಯಾಪಾರಿ ನಗರಸಭೆಯಿಂದ ಅನುಮತಿ ಪಡೆಯದೆ ವ್ಯಾಪಾರ ಮಾಡುತ್ತಿದ್ದುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಅಂಗಡಿಯನ್ನು ತೆರವುಗೊಳಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.