ಮಡಿಕೇರಿ, ಡಿ. ೩೦: ಜಿಲ್ಲೆಯಲ್ಲಿ ಗುರುವಾರ ೧೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೫, ವೀರಾಜಪೇಟೆ ತಾಲೂಕಿನಲ್ಲಿ ೩, ಸೋಮವಾರಪೇಟೆ ತಾಲೂಕಿನಲ್ಲಿ ೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೯೩೩ ಆಗಿದ್ದು, ಒಟ್ಟು ೩೫,೨೨೦ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೮ ಮರಣ ಪ್ರಕರಣಗಳು ವರದಿಯಾಗಿವೆ. ೨೭೫ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೪೦ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೦.೫೪ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.