ಮಡಿಕೇರಿ ಡಿ.೨೯ : ಕೊಡಗು ಕುಲಾಲ (ಕುಂಬಾರ) ಮಡಿಕೆ ತಯಾರಕರ ಸಹಕಾರ ಸಂಘದ ೧೫ನೇ ವಾರ್ಷಿಕ ಮಹಾಸಭೆ ನಗರದಲ್ಲಿ ನಡೆಯಿತು. ಪೆನ್‌ಷನ್‌ಲೇನ್‌ನ ಬೆಳ್ಯಪ್ಪ ಸ್ಮಾರಕ ಭವನದಲ್ಲಿ ಸಂಘದ ಜಿಲ್ಲಾಧ್ಯಕ್ಷ ಎಂ.ಡಿ.ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಅಭಿವೃದ್ಧಿ ಕುಂಠಿತವಾಗಲು ಕಾರಣಗಳು ಮತ್ತು ಬೆಳವಣಿಗೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಮುಂದಿನ ದಿನಗಳಲ್ಲಿ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಕೊಂಡು ಅಭ್ಯುದಯಕ್ಕಾಗಿ ಶ್ರಮಿಸಲು ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಕೊಡಗು ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ನಿವೃತ್ತ ಅಭಿವೃದ್ಧಿ ಅಧಿಕಾರಿ ಎಂ.ಎ.ಶಾAತಿ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಕೆ.ಕುಶಾಲಪ್ಪ ಉಪಸ್ಥಿತರಿದ್ದರು.

೧೦ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ವಿಶಿಷ್ಟ ಸೇವೆಯಲ್ಲಿ ತೊಡಗಿರುವ ಜನಾಂಗದ ಓ.ಆರ್.ಮಾಯಿಲಪ್ಪ ಸಂಪಾಜೆ ಹಾಗೂ ಕೆ.ಆರ್.ರಾಜ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಗತ್ಯವಿರುವ ಫಲಾನುಭವಿಗಳಿಗೆ ಸಾಲದ ಚೆಕ್‌ಗಳನ್ನು ವಿತರಿಸ ಲಾಯಿತು. ಪಿಡಿಒ ವಿ.ಜಿ.ಲೋಕೇಶ್ ಪ್ರಾರ್ಥಿಸಿ, ನಿರೂಪಿಸಿದರು. ಭರತ್ ಬೆಟ್ಟಗೇರಿ ಸ್ವಾಗತಿಸಿ, ಓ.ಆರ್.ಮಾಯಿಲಪ್ಪ ವಂದಿಸಿದರು.