ಮಡಿಕೇರಿ, ಡಿ. ೩೦: ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ ಬೆಳೆಸಲು ಹಾಗೂ ಮಕ್ಕಳನ್ನು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ ಮುಂದುವರಿಕೆಗೆ ಉತ್ತೇಜಿಸಲು ಅವರ ವೈದ್ಯಕೀಯ, ಪೌಷ್ಠಿಕ ಆಹಾರ, ಶೈಕ್ಷಣಿಕ ವೃತ್ತಿ ತರಬೇತಿ ಮತ್ತು ಇತರೆ ಅವಶ್ಯಕತೆ ಪೂರೈಸಲು ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಸಲುವಾಗಿ ಬಾಲನ್ಯಾಯ (ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ ೨೦೧೫ ರಡಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪ್ರಾಯೋಜಕತ್ವದಡಿ ಪಾಲನೆ ಮತ್ತು ಪೋಷಣೆ ಅಗತ್ಯವಿರುವ ೦-೧೮ ವರ್ಷದೊಳಗಿನ ಮಕ್ಕಳಿಗೆ ತಿಂಗಳಿಗೆ ರೂ. ಒಂದು ಸಾವಿರ ಗಳಂತೆ ೩ ವರ್ಷಗಳವರೆಗೆ ಒಂದು ಕುಟುಂಬದ ಗರಿಷ್ಠ ೨ ಮಕ್ಕಳಿಗೆ ಪೋಷಣಾ ಭತ್ಯೆ ನೀಡುವ ಕಾರ್ಯಕ್ರಮಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಂದೆ/ ಕುಟುಂಬದ ದುಡಿಯುವ ಸದಸ್ಯರನ್ನು ಕಳೆದುಕೊಂಡಿದ್ದಲ್ಲಿ, ತಂದೆ ತಾಯಿ ಇಲ್ಲದ ಮಕ್ಕಳಿಗೆ, ತಂದೆ ತಾಯಿಗಳು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ, ಕುಟುಂಬಕ್ಕೆ ಆಧಾರವಾಗಿದ್ದ ಪೋಷಕರು ಜೈಲಿನಲ್ಲಿದ್ದರೆ, ಅಂತಹ ಕುಟುಂಬದ ಮಕ್ಕಳು ಅರ್ಜಿ ಸಲ್ಲಿಸಬಹು ದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ತಿಳಿಸಿದ್ದಾರೆ.