ಕರಿಕೆ, ಡಿ. ೩೧. ಕೊಡಗಿನ ಜ್ವಲಂತ ಸಮಸ್ಯೆಯಾದ ಆನೆ-ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ತಮ್ಮ ಕಚೇರಿಯಲ್ಲಿ ಅರಣ್ಯಾಧಿಕಾರಿಗಳ ಸಭೆ ನಡೆಸಿದರು. ನಾಗರಹೊಳೆ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿ, ತಿತಿಮತಿ, ತಲಕಾವೇರಿ, ಪುಷ್ಪಗಿರಿ, ಬ್ರಹ್ಮಗಿರಿ ಅಭಯಾರಣ್ಯಗಳ ಅಂಚಿನ ಗ್ರಾಮಗಳ ಜನವಸತಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿ ಜನರು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ದೂರು ಬಂದ ಹಿನ್ನೆಲೆಯಲ್ಲಿ ಆ ವ್ಯಾಪ್ತಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಸಭೆ ನಡೆಸಿದರು. ಅರಣ್ಯ ಇಲಾಖೆ ಮೇಲೆ ಜನತೆ ನಂಬಿಕೆ ಕಳೆದುಕೊಂಡಿದ್ದು, ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆಯ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ. ವನ್ಯಜೀವಿ ದಾಳಿಯಿಂದ ಜೀವ ಹಾನಿ, ಬೆಳೆಹಾನಿ ಪ್ರಕರಣಗಳಿಗೆ ತುರ್ತಾಗಿ ಪರಿಹಾರ ವಿತರಿಸಬೇಕು. ಜಿಲ್ಲೆಯಲ್ಲಿ ಶಾಶ್ವತವಾಗಿ ಸಮಸ್ಯೆ ಪರಿಹಾರ ಕಾಣಲು ಸೋಲಾರ್ ಬೇಲಿ, ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ಸೇರಿದಂತೆ ದಾಳಿ ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕು. ಅನುದಾನದ ಕೊರತೆ ಇದ್ದಲ್ಲಿ ಸರಕಾರಕ್ಕೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದಲ್ಲದೆ, ಈಗ ಮಂಜೂರಾದ ಅನುದಾನದಲ್ಲಿ ಬೆಳೆಗಾರರಿಗೆ ಉಪಯೋಗ ಆಗುವ ನಿಟ್ಟಿನಲ್ಲಿ ಪಾರದರ್ಶಕ ಕಾಮಗಾರಿ ನಡೆಸಲು ನಿರ್ದೇಶನ ನೀಡಿದರು. ಸಭೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಳಾದ ಶ್ರೀನಿವಾಸ್ ನಾಯಕ್, ದಯಾನಂದ, ಗೋಪಾಲ್, ಸತೀಶ್ ಸೇರಿದಂತೆ ಸಾರ್ವಜನಿಕರು ಇತರೆ ಅಧಿಕಾರಿಗಳು ಹಾಜರಿದ್ದರು.

ಸುಧೀರ್ ಹೊದ್ದೆಟ್ಟಿ