ಕುಶಾಲನಗರ, ಡಿ.೩೦: ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಹಾಗೂ ಪತ್ರಕರ್ತ ಎಂ.ಎನ್. ಚಂದ್ರಮೋಹನ್ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕೊಡಮಾಡುವ ಡಾ. ಹೆಚ್ . ನರಸಿಂಹಯ್ಯ ಪ್ರಶಸ್ತಿ-೨೦೨೧ ಅನ್ನು ಶಿವಮೊಗ್ಗದ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.
ಶಿವಮೊಗ್ಗ ಕುವೆಂಪು ರಂಗಮAದಿರದಲ್ಲಿ ನಡೆದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಚಿತ್ರದುರ್ಗದ ಮುರುಘಾಮಠ ಶಿವಮೂರ್ತಿ ಮುರುಘಾ ಶರಣರು, ಇಸ್ರೋ ಸಂಸ್ಥೆ ಮಾಜಿ ಅಧ್ಯಕ್ಷ ವಿಜ್ಞಾನಿ ಕಿರಣ್ ಕುಮಾರ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ವೀರಭದ್ರಪ್ಪ ಮತ್ತಿತರರು ಇದ್ದರು.