ಮಡಿಕೇರಿ, ಡಿ. ೩೧: ಇತ್ತೀಚಿನ ದಿನಗಳಲ್ಲಿ ಕೊಡಗಿನ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಮಡಿಕೇರಿ ನಗರದ ಸಂತ ಜೋಸೆಫರ ಶಾಲೆ ಹಾಗೂ ಕುಶಾಲನಗರ ಸಮೀಪದ ಹಾರಂಗಿ ರಸ್ತೆಯಲ್ಲಿರುವ ಜ್ಞಾನಗಂಗಾ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ನಗರದ ಸಂತ ಜೋಸೆಫರ ಶಾಲೆಯ ೧೦ ವಿದ್ಯಾರ್ಥಿಗಳಿಗೆ ಹಾಗೂ ಜ್ಞಾನಗಂಗದ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಸಂತ ಜೋಸೆಫರ ಶಾಲೆಯ ೯ನೇ ತರಗತಿಯ ಓರ್ವ ವಿದ್ಯಾರ್ಥಿನಿಗೆ ಸೋಂಕು ಪತ್ತೆಯಾದ ಹಿನ್ನೆಲೆ ತರಗತಿಯ ೫೯ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ೯ ಮಂದಿಗೆ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಯ ಒಟ್ಟು ೭೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜೊತೆಗೆ ಶಾಲೆಯ ೨೦ ಸಿಬ್ಬಂದಿಗಳ ‘ಸ್ವಾö್ಯಬ್’ ಸಂಗ್ರಹಿಸಿ ವರದಿಗೆ ರವಾನಿಸಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ಸದ್ಯಕ್ಕೆ ವಿದ್ಯಾರ್ಥಿಗಳು ಹೋಂ ಕ್ವಾರಂಟೈನ್ನಲ್ಲಿದ್ದಾರೆ. ತಜ್ಞ ವೈದ್ಯರ ಸಭೆ ಬಳಿಕ ವಿದ್ಯಾರ್ಥಿಗಳನ್ನು ಹೋಂ ಕ್ವಾರಂಟೈನ್ ಅಥವಾ ಕೋವಿಡ್ ಕೇರ್ ಸೆಂಟರ್ ದಾಖಲು ಮಾಡುವುದರ ಬಗ್ಗೆ ನಿರ್ಧರಿಸಲಾಗುವುದು.