ಮಡಿಕೇರಿ, ಡಿ. ೩೧: ನಗರದ ಅಮೃತ ಮೆಡಿಕಲ್ ಸೆಂಟರ್ನಲ್ಲಿ ತಾ. ೭ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ತಜ್ಞವೈದ್ಯ ಡಾ.ಮೋಹನ್ ಅಪ್ಪಾಜಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ ೧೦ ಗಂಟೆಯಿAದ ೧ ಗಂಟೆಯವರೆಗೆ ನುರಿತ ವೈದ್ಯರಿಂದ ಉಚಿತ ಅಲರ್ಜಿ ಹಾಗೂ ಅಸ್ತಮಾ ತಪಾಸಣೆ ಮಾಡಲಾಗುವುದು. ಜೊತೆಗೆ ಜಿಲ್ಲಾಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಉಚಿತ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು. ತಪಾಸಣೆ ಸಂದರ್ಭ ಗುರುತಿಸಲಾದ ರೋಗಿಗಳನ್ನು ಸ್ಪೆöÊರೋಮೆಟ್ರಿ (ಶ್ವಾಸಕೋಶದ ಕಾರ್ಯ ಪರೀಕ್ಷೆ) ನಂತಹ ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಲಾಗುತ್ತದೆ. ೪೫ ವರ್ಷ ಮೇಲ್ಪಟ್ಟವರಿಗೆ ಉಚಿತ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಸಲಾಗುವುದು. ನೋಂದಾಣಿಗೆ ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ ೮೭೯೨೮೭೪೦೩೦, ೦೮೨೭೨-೨೨೧೪೬೦ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರವಣ ತಜ್ಞ ಅಚ್ಚಯ್ಯ ಉಪಸ್ಥಿತರಿದ್ದರು.