ಮಡಿಕೇರಿ, ಡಿ.೩೧ : ‘ಒಂದು ಒಳ್ಳೆಯ ಪುಸ್ತಕ ನೂರು ಸ್ನೇಹಿತರಿಗೆ ಸಮ’ ಆಗಿದ್ದು, ಒಳ್ಳೆಯ ಪುಸ್ತಕ ಅಧ್ಯಯನದಿಂದ ಮಾನಸಿಕ ನೆಮ್ಮದಿ ಮತ್ತು ಬೌದ್ಧಿಕ ವಿಕಸನಕ್ಕೆ ಸಹಕಾರಿಯಾಗಲಿದೆ ಎಂದು ಸಾಹಿತಿ ಮತ್ತು ಚಿಂತಕ ಅರವಿಂದ ಚೊಕ್ಕಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಭೋದಕ ಆಸ್ಪತ್ರೆಯಲ್ಲಿ ‘ಅಕ್ಷರ ಆರೋಗ್ಯ ಅಭಿಯಾನ’ ಪ್ರಯುಕ್ತ ಗ್ರಂಥಾಲಯ ಉದ್ಘಾಟಿಸಿ, ಬಳಿಕ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಕಾವೇರಿ ಬ್ಲಾಕ್ನ ಉಪನ್ಯಾಸ ಕೊಠಡಿಯಲ್ಲಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪುಸ್ತಕ ಓದುವುದರಿಂದ ವಿಶಾಲ ಮನೋಭಾವ ಬೆಳೆಯುತ್ತದೆ. ಜೊತೆಗೆ ಅಗಾಧ ಜ್ಞಾನ ಶಕ್ತಿ ಪಡೆಯಬಹುದಾಗಿದೆ. ಆದ್ದರಿಂದ ಗ್ರಂಥಾಲಯ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಮಾತನಾಡಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡಲಾಗಿದ್ದು, ಇವುಗಳ ಸದುಪಯೋಗಪಡಿಸಿಕೊಳ್ಳುವಂತಾಗಬೇಕು ಎಂದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ನಂಜುAಡೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಮಾತನಾಡಿದರು.
ಜಿಲ್ಲಾ ಶಸ್ತçಚಿಕಿತ್ಸಕರು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಎಸ್. ಮಂಜುನಾಥ್, ನಿವಾಸಿ ವೈದ್ಯಕೀಯ ಅಧಿಕಾರಿ ಡಾ. ರೂಪೇಶ್ ಗೋಪಾಲ್, ಡಾ. ಮನೋಹರ್ ಪಾಟ್ಕರ್, ಸಾಹಿತಿಗಳಾದ ನಾಗೇಶ್ ಕಾಲೂರು, ಅನಂತಶಯನ ಇತರರು ಇದ್ದರು.
ಡಾ. ರಾಘವೇಂದ್ರ ನಿರೂಪಿಸಿದರು. ಡಾ. ದರ್ಶನ್ ಸ್ವಾಗತಿಸಿದರು. ವೈದ್ಯಕೀಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಡಾ. ಕುಶ್ವಂತ್ ಕೋಳಿಬೈಲು ವಂದಿಸಿದರು.