ಮಡಿಕೇರಿ, ಡಿ. ೩೧: ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ೨೦೧೫ ರಿಂದ ೨೦೨೦ ರವರೆಗಿನ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಫಲಾನುಭವಿಗಳಿಗೆ ಕೊರೆಸಲಾದ ಕೊಳವೆ ಬಾವಿ ಪರಿಶೀಲಿಸಲು ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿಯು ತಾ. ೪ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಹಿನ್ನೆಲೆ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಅಭಿವೃದ್ದಿ ನಿಗಮ ಸೇರಿದಂತೆ ಹಲವು ನಿಗಮಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ ಸಂಬAಧ ಮಾಹಿತಿ ನೀಡುವಂತೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೆಯೇ ವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಶಿಷ್ಟಾಚಾರ ಪಾಲಿಸುವಂತೆ ನಿರ್ದೇಶನ ನೀಡಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಚಂದ್ರಶೇಖರ್ ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಪ್ರವಾಸ ಕಾರ್ಯಕ್ರಮ ಸಂಬAಧಿಸಿದAತೆ ಅಗತ್ಯ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಧಿಕಾರಿ ಕೆ.ಶ್ರೀನಿವಾಸ್, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಪಂಚಾಯತ್ ರಾಜ್ ಇಲಾಖೆಯ ಇಇ ಮಂಜುನಾಥ್, ಸಣ್ಣ ನೀರಾವರಿ ಇಲಾಖೆಯ ಎಇಇ ಕಾಂತರಾಜು, ಸೆಸ್ಕ್ ಎಇಇ ವಿನಯ ಕುಮಾರ್, ಭೂವಿಜ್ಞಾನಿ ಸೌಮ್ಯ ಅವರು ಹಲವು ಮಾಹಿತಿ ನೀಡಿದರು.