ಪೊನ್ನಂಪೇಟೆ, ಜ.೨: ಇತ್ತೀಚೆಗೆ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಟರ್ಫ್ ಮೈದಾನದಲ್ಲಿ ನಡೆದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯಗಳ ಮಹಿಳಾ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ, ಹಾಕಿ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವ ಹಾಕಿ ಕೂರ್ಗ್ ಕಾರ್ಯದರ್ಶಿ ಹಾಗೂ ಮಾಜಿ ಅಂತರಾಷ್ಟಿçÃಯ ಹಾಕಿ ಆಟಗಾರ ಬುಟ್ಟಿಯಂಡ ಚಂಗಪ್ಪ ಮತ್ತು ಹಾಕಿ ಕೂರ್ಗ್ ನಿರ್ದೇಶಕ ಹಾಗೂ ಹಾಕಿ ತರಬೇತುದಾರ ಮಿನ್ನಂಡ ಜೋಯಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಟಿ.ಕೆ.ಬೋಪಯ್ಯ, ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಯಡಪಡಿತ್ತಾಯ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಸಿ.ಜಿ.ಕುಶಾಲಪ್ಪ, ಪೊನ್ನಂಪೇಟೆ ಸಾಯಿ ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಝರು ಗಣಪತಿ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಜೆರಾಲ್ಡ್ ಸಂತೋಷ್ ಡಿಸೋಜ, ಹಾಕಿ ಪಂದ್ಯಾವಳಿಯ ಸಂಚಾಲಕಿ ಕಂಬಿರAಡ ರಾಖಿ ಗಣಪತಿ ಇನ್ನಿತರರು ಹಾಜರಿದ್ದರು.
-ಚನ್ನನಾಯಕ