ನೈಟ್ ಕರ್ಫ್ಯೂ ವಿಸ್ತರಣೆಗೆ ಗಂಭೀರ ಚಿಂತನೆ
ಬೆAಗಳೂರು, ಜ. ೨: ರಾಜ್ಯದಲ್ಲಿ ಕೊರೊನಾ ಮತ್ತು ಓಮಿಕ್ರಾನ್ ರೂಪಾಂತರಿ ಸೋಂಕು ತಡೆಗಟ್ಟುವ ನಿಟ್ಟನಲ್ಲಿ ರಾಜ್ಯಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಸಂಬAಧ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಆಯುಕ್ತ ರಣದೀಪ್, ರಾಜ್ಯದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ. ನಿನ್ನೆ ರಾಜ್ಯದಲ್ಲಿ ಆರು ತಿಂಗಳ ಬಳಿಕ ೧,೦೩೩ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲೂ ಮೂರನೇ ಅಲೆ ಭೀತಿ ಎದುರಾಗಿದ್ದು, ಫೆಬ್ರವರಿ ತಿಂಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗಲಿದೆ ಎಂದು ತಜ್ಞರು ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿ ಮೂರನೇ ಅಲೆ ಸುಳಿವು ನೀಡಿದ್ದು, ದೆಹಲಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ತಜ್ಞರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದರು. ರಾಜ್ಯದಲ್ಲಿರುವ ವಸತಿ, ಶಾಲೆ, ಹಾಸ್ಟೆಲ್, ಅಪಾರ್ಟ್ಮೆಂಟ್, ಮಾಲ್ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮ ಪಾಲಿಸಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು, ಕ್ಲಸ್ಟರ್‌ಗಳಿಂದ ಶೇ. ೩೦ ರಷ್ಟು ಎಲ್ಲ ಮಾದರಿಗಳನ್ನು ಕಡ್ಡಾಯವಾಗಿ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕೆಂದು ತಜ್ಞರು ಶಿಫಾರಸ್ಸು ಮಾಡಿರುವುದಾಗಿ ಅವರು ತಿಳಿಸಿದರು.
ಇಂದಿನಿAದ ಮಕ್ಕಳಿಗೆ ಕೋವಿಡ್ ಲಸಿಕೆ
ಬೆಂಗಳೂರು, ಜ. ೨: ಇಂದಿನಿAದ ರಾಜ್ಯದಲ್ಲಿ ೧೫ ರಿಂದ ೧೮ ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆ ಲಸಿಕೆ ಹಾಕಿಸಿಕೊಂಡ ಮಕ್ಕಳಿಗೆ ಮರುದಿನ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶಾಲೆಗಳಲ್ಲಿ ಮೊದಲ ದಿನ ೫೦ ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗೆ ಲಸಿಕೆ ನೀಡುವ ಸಂದರ್ಭದಲ್ಲಿ ಶಾಲೆಯ ಬಳಿ ಆ್ಯಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಲಸಿಕೆ ಹಾಕಿಸಲು ವಾಕ್-ಇನ್ ನೋಂದಣಿ ಪಡೆಯಬಹುದು ಇಲ್ಲವೇ ಈಗಾಗಲೇ ಪ್ರಾರಂಭಿಸಲಾಗಿರುವ ಕೋ-ವಿನ್ ಆಪ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಆಧಾರ್ ಮತ್ತು ಇತರ ರಾಷ್ಟಿçÃಯ ಗುರುತಿನ ಚೀಟಿಗಳಿಲ್ಲದ ಮಕ್ಕಳು ತಮ್ಮ ೧೦ನೇ ತರಗತಿಯ ಗುರುತಿನ ಚೀಟಿಯನ್ನು ನೋಂದಣಿಗಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶಿಯ ಕೋವಾಕ್ಸಿನ್ ಲಸಿಕೆಯನ್ನು ೧೫ ರಿಂದ ೧೮ ವರ್ಷ ವಯೋಮಾನದ ಮಕ್ಕಳಿಗೆ ನೀಡಲಾಗುವುದು. ಮೊದಲ ಡೋಸ್ ಲಸಿಕೆ ನೀಡಿದ ೨೮ ದಿನಗಳ ಬಳಿಕ ಎರಡನೇ ಡೋಸ್ ಲಸಿಕೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ವಾರ ತನಿಖಾ ವರದಿ ಸಲ್ಲಿಕೆ ಸಾಧ್ಯತೆ
ನವದೆಹಲಿ, ಜ. ೨: ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಎಂಐ-೧೭ ವಿ೫ ಅಪಘಾತಕ್ಕೆ ಸಂಬAಧಿಸಿದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ವಾರ ವಾಯುಪಡೆ ಕೇಂದ್ರ ಕಚೇರಿಗೆ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ. ಅಪಘಾತದ ಕಾರಣದ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲವಾದರೂ, ಹವಾಮಾನ ವೈಪÀರಿತ್ಯವೇ ಇದಕ್ಕೆ ಪ್ರಮುಖ ಕಾರಣ ಎಂದು ನಂಬಲಾಗಿದೆ. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದ ತನಿಖೆಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಪೈಲಟ್ ನಿಯಂತ್ರಣ ಕಳೆದುಕೊಂಡಿದ್ದರಿAದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ತನಿಖಾ ತಂಡ ತನ್ನ ವರದಿಯನ್ನು ಖಚಿತಪಡಿಸಲು ಸ್ವತ: ವಾಯುಪಡೆಯ ಕಾನೂನು ವಿಭಾಗದ ಸಲಹೆಯನ್ನು ಪಡೆಯುತ್ತಿದ್ದು, ನಾಲ್ಕೆöÊದು ದಿನಗಳಲ್ಲಿ ಈ ವರದಿ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅವರಿಗೆ ಹಸ್ತಾಂತರಿಸುವ ನಿರೀಕ್ಷೆಯಿದೆ.
ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕ್ ಪ್ರಜೆ ಹತ್ಯೆ
ಕುಪ್ವಾರ, ಜ. ೨: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಓರ್ವ ಪ್ರಜೆಯನ್ನು ಭಾರತೀಯ ಸೈನಿಕರು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತನಿಂದ ಎಕೆ-೪೭ ರೈಫಲ್ ಮತ್ತು ಅಪಾರ ಪ್ರಮಾಣದ ಶಸ್ತಾçಸ್ತçಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. ನಿಯಂತ್ರಣ ರೇಖೆಯುದ್ದಕ್ಕೂ ಉಭಯ ಸೇನೆಗಳ ನಡುವೆ ನಡೆಯುತ್ತಿರುವ ಕದನ ವಿರಾಮ ತಿಳುವಳಿಕೆಯ ಸಂಪೂರ್ಣ ಉಲ್ಲಂಘನೆ ಅಥವಾ ಪಾಕಿಸ್ತಾನ ಸೇನೆಯ ಗಡಿ ಕ್ರಿಯಾ ತಂಡ ಜನವರಿ ೧ ರಂದು ಕುಪ್ವಾರ ಜಿಲ್ಲೆಯ ಕೇರಾನ್ ವಲಯದಲ್ಲಿ ಒಳನುಸುಳಲು ಯತ್ನಿಸಿದೆ. ಗಡಿಯೊಳಗೆ ನುಸುಳಲು ಯತ್ನಿಸಿದ ವ್ಯಕ್ತಿಯನ್ನು ಪಾಕಿಸ್ತಾನದ ಮೊಹಮ್ಮದ್ ಸಬೀರ್ ಮಲ್ಲಿಕ್ ಎಂದು ಗುರುತಿಸಲಾಗಿದೆ. ಆತನಿಂದ ಶಸ್ತಾçಸ್ತçಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಶಿಕ್ಷಣ ಸಚಿವ ನಾಗೇಶ್‌ಗೆ ಕೋವಿಡ್ ಪಾಸಿಟಿವ್
ಬೆಂಗಳೂರು, ಜ. ೨: ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ನಾಗೇಶ್ ಅವರು ಈಗ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಕೊರೊನಾ ಲಘು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-೧೯ ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಟ್ವೀಟ್ ಮಾಡಿದ್ದಾರೆ.
ಪರಮಾಣು ಮಾಹಿತಿ ಪರಸ್ಪರ ಹಂಚಿಕೊAಡ ಭಾರತ-ಪಾಕಿಸ್ತಾನ
ನವದೆಹಲಿ, ಜ. ೨: ಭಾರತ, ಪಾಕಿಸ್ತಾನ ತಮ್ಮ ದೇಶಗಳಲ್ಲಿರುವ ಪರಮಾಣು ವಿದ್ಯುತ್ ಸ್ಥಾವರಗಳು, ಪರಮಾಣು ಇಂಧನಕ್ಕೆ ಸಂಬAಧಿಸಿದ ಇತರ ಸೌಲಭ್ಯಗಳ ಮಾಹಿತಿಯನ್ನು ಸತತ ೩೧ ವರ್ಷವೂ ವಿನಿಮಯ ಮಾಡಿಕೊಂಡಿವೆ. ಪರಸ್ಪರ ಪರಮಾಣು ಕೇಂದ್ರಗಳ ಮೇಲೆ ದಾಳಿ ಮಾಡುವುದನ್ನು ತಡೆಯುವ ಉದ್ದೇಶದಿಂದ ಮಾಡಿಕೊಂಡ ದ್ವಿಪಕ್ಷೀಯ ಒಪ್ಪಂದದ ಭಾಗವಾಗಿ ಉಭಯ ದೇಶಗಳು ರಾಜತಾಂತ್ರಿಕ ಮಾರ್ಗಗಳ ಮೂಲಕ ನವದೆಹಲಿ ಮತ್ತು ಇಸ್ಲಾಮಾಬಾದ್‌ನಲ್ಲಿ ಮಾಹಿತಿ ವಿನಿಮಯ ಮಾಡಿಕೊಂಡಿವೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸಿದೆ. ಜನವರಿ ೧ ರಂದು ತಮ್ಮ ಪರಮಾಣು ಕೇಂದ್ರಗಳು, ಇತರ ಸೌಲಭ್ಯಗಳ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲು ಉಭಯ ದೇಶಗಳು ೧೯೯೧ರಲ್ಲಿ ಒಪ್ಪಂದ ಮಾಡಿಕೊಂಡಿದ್ದವು. ಗಡಿಯಾಚೆಗಿನ ಭಯೋತ್ಪಾದನೆ, ಕಾಶ್ಮೀರ ವಿಚಾರದಲ್ಲಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ಮುಂದುವರಿದಿರುವ ಸಮಯದಲ್ಲೂ ಒಪ್ಪಂದದ ಅನುಷ್ಠಾನ ಎಂದಿನAತೆ ಮುಂದುವರಿದಿರುವುದು ಮಹತ್ವಪಡೆದುಕೊಂಡಿದೆ.
ಚೀನಾದಲ್ಲಿ ಕೋವಿಡ್ ಪ್ರಮಾಣ ಹೆಚ್ಚಳ-ಆತಂಕ
ಷಿಯಾನ್, ಜ. ೨: ಚೀನಾದಲ್ಲಿ ಕೋವಿಡ್ ನಿಯಮಾವಳಿಗಳು ಜಾರಿಯಲ್ಲಿದ್ದರೂ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ೨೦೧೯ ರಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪ್ರಾರಂಭವಾದ ನಂತರದ ದಿನಗಳಲ್ಲಿ ಒಂದು ವಾರದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಷಿಯಾನ್ ನಗರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು ಈ ಭಾಗದಲ್ಲಿ ೧೦ ದಿನಗಳವರೆಗೆ ಲಾಕ್‌ಡೌನ್ ಹೇರಲಾಗಿತ್ತು. ಷಿಯಾನ್‌ನಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳದ ಹಿಂದಿನ ಕಾರಣವೆಂದರೆ ಪಾಕಿಸ್ತಾನ. ಪಾಕಿಸ್ತಾನದಿಂದ ಆಗಮಿಸಿದ ಪ್ರಯಾಣಿಕ ವಿಮಾನವೊಂದರಿAದ ಷಿಯಾನ್‌ನಲ್ಲಿ ಮೊದಲ ಕೋವಿಡ್-೧೯ ಪ್ರಕರಣ ವರದಿಯಾಗುವುದಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದ್ದು, ಪಾಕಿಸ್ತಾನದಿಂದ ಬಂದ ವಿಮಾನದಲ್ಲಿದ್ದ ಮಂದಿಯಿAದಲೇ ಕೋವಿಡ್-೧೯ ಸೋಂಕು ಸ್ಥಳೀಯವಾಗಿ ಹರಡುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಷಿಯಾನ್ ನಗರದಲ್ಲಿನ ಕೋವಿಡ್-೧೯ ಪ್ರಕರಣಗಳ ಏರಿಕೆ ದೇಶಾದ್ಯಂತ ಹರಡುವ ಆತಂಕ ಉಂಟುಮಾಡಿದೆ.