ಮಡಿಕೇರಿ, ಜ. ೧: ನಗರದ ಎಎಲ್‌ಜಿ ಕ್ರೆಸೆಂಟ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ವೇಷಣಾ -II ವಿಜ್ಞಾನ ಮೇಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕೂಡಿಗೆ ಡಯಟ್ ಪ್ರಾಂಶುಪಾಲ ಸುರೇಶ್ ಕೆ.ವಿ. ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಮನೋಭಾವ, ವೈಜ್ಞಾನಿಕ ದೃಷ್ಟಿಕೋನ ಮತ್ತು ಮಾನವೀಯ ಗುಣ ಇವೆಲ್ಲವುಗಳನ್ನು ಬೆಳೆಸಿಕೊಳ್ಳಬೇಕಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿ ಜನಾಬ್ ಮೊಹಮ್ಮದ್ ಹನೀಫ್ ಅವರು ವಹಿಸಿದ್ದರು.
ವೇದಿಕೆಯಲ್ಲಿ ಪ್ರಾಂಶುಪಾಲೆ ಜೊಯ್ಸಿ ವಿನಯ, ಹಿರಿಯ ಶಿಕ್ಷಕ ನಾಗಯ್ಯ ಶೆಟ್ಟಿ, ಶಿಕ್ಷಕಿ ಸುಲ್ಹತ್ ಹಾಗೂ ವಿಜ್ಞಾನ ವಿಭಾಗದ ಮುಖ್ಯಸ್ಥೆ ಮುಬೀನಾ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಹತ್ತನೇ ತರಗತಿಯ ವಿದ್ಯಾರ್ಥಿ ಸಾಕಿಬ್ ನೆರವೇರಿಸಿದರು ಪ್ರದ್ಯುಮ್ನ ಸ್ವಾಗತಿಸಿ ತುಫೇಲ್ ರವರು ವಂದಿಸಿದರು.