ಮಡಿಕೇರಿ, ಜ. ೨: ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ದಂಪತಿ ಹಾಗೂ ಇತರ ಸೈನಿಕರಿಗೆ ಗೌರವ ಸೂಚಿಸುವ ಸಲುವಾಗಿ ಹಿಂದೂ ಜಾಗರಣಾ ವೇದಿಕೆ ಹಾಗೂ ಹಿಂದೂ ಯುವ ವಾಹಿನಿ ವತಿಯಿಂದ ೧೨ ದಿನಗಳ ಕಾಲ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದ ಯೋಧ ನಮನಂ ಶ್ರದ್ಧಾಂಜಲಿ ರಥಯಾತ್ರೆಯ ಸಮಾರೋಪ ಸಮಾರಂಭ ತಾ. ೪ ರಂದು (ನಾಳೆ) ನಡೆಯಲಿದೆ.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವ ವಾಹಿನಿ ಜಿಲ್ಲಾ ಸಂಯೋಜಕ ಎಚ್.ಎನ್. ಚೇತನ್, ಹಿಂ.ಜಾ.ವೇ. ಕಾರ್ಯದರ್ಶಿ ಮಹೇಶ್ ಈ ಬಗ್ಗೆ ಮಾಹಿತಿ ನೀಡಿದರು. ಶ್ರದ್ಧಾಂಜಲಿ ರಥಯಾತ್ರೆಯ ಜಿಲ್ಲೆಯ ಐದು ತಾಲೂಕುಗಳಾದ ಮಡಿಕೇರಿ, ವೀರಾಜಪೇಟೆ, ಪೊನ್ನಂಪೇಟೆ, ಸೋಮವಾರಪೇಟೆ ಹಾಗೂ ಕುಶಾಲನಗರದ ಎಲ್ಲಾ ಗ್ರಾಮಗಳಲ್ಲಿ ಸಂಚರಿಸಿದೆ. ತಾ. ೪ ರಂದು (ನಾಳೆ) ಮಧ್ಯಾಹ್ನ ೨.೩೦ ಗಂಟೆಯಿAದ ೩.೩೦ರವರೆಗೆ ಕುಶಾಲನಗರ ಪಟ್ಟಣದಲ್ಲಿ ರಥವು ಸಂಚರಿಸಲಿದ್ದು, ೩.೩೦ ಗಂಟೆಗೆ ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಅಧ್ಯಕ್ಷ ಪಿ. ಸೋಮಣ್ಣ ವಹಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಅವರುಗಳು ತಿಳಿಸಿದರು.

ಗೋಷ್ಠಿಯಲ್ಲಿ ಹಿಂದೂ ಯುವವಾಹಿನಿಯ ಕುಶಾಲನಗರ ತಾಲೂಕು ಪ್ರಧಾನ ಕಾರ್ಯದರ್ಶಿ ಎಲ್. ಹರೀಶ್, ಹಿಂ.ಜಾ.ವೇ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಕ್ಕೇರ ಅಜಿತ್ ಉಪಸ್ಥಿತರಿದ್ದರು.