ಮಡಿಕೇರಿ, ಜ. ೧: ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾಡಳಿತ ಮತ್ತು ಜಿ.ಪಂ. ಸಂಯುಕ್ತ ಆಶ್ರಯದಲ್ಲಿ ತಾ. ೩ ರಿಂದ ೧೨ ರವರೆಗೆ ಕಾವೇರಿ ವಸ್ತçಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನಗರದ ಗಾಂಧಿ ಮೈದಾನದಲ್ಲಿ ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ. ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಹೆಚ್.ಎನ್. ಶಂಕರ್ ನಾರಾಯಣ್, ಬೆಂಗಳೂರು ದಕ್ಷಿಣ ವಲಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಎ. ಸುರೇಶ್ಕುಮಾರ್, ಪೌರಾಯುಕ್ತ ರಾಮದಾಸ್, ಜಿ.ಪಂ. ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ಪಾಲ್ಗೊಳ್ಳಲಿದ್ದಾರೆ.