ಕೂಡಿಗೆ, ಜ. ೧: ಹೆಬ್ಬಾಲೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಹೆಚ್.ಎಲ್. ರಮೇಶ್ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳಿಗೆ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಶಿವಶಂಕರ್ ಅವರು ಅಪರಾಧ ತಡೆಗೆ ಸಂಬAಧಿಸಿದAತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಎಂ.ಎನ್. ಧರ್ಮಪ್ಪ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಸವರಾಜಶೆಟ್ಟಿ, ಹಿರಿಯ ಉಪನ್ಯಾಸಕರಾದ ಗಣೇಶ್, ವೆಂಕಟನಾಯಕ್, ಹೆಚ್ ಎಸ್, ಬಸವರಾಜ್ ನಯನ, ಗೌತಮಿ ದರ್ಶನ್, ಪೊಲೀಸ್ ಸಿಬ್ಬಂದಿಗಳಾದ ಶನತ್, ಯೋಗೇಶ್ ಹಾಜರಿದ್ದರು.