ಪಾಲಿಬೆಟ್ಟ, ಜ. ೩: ರಾಜ್ಯಾದ್ಯಂತ ೧೫ ರಿಂದ ೧೮ ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುವ ಅಭಿಯಾನಕ್ಕೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪಾಲಿಬೆಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆ ಬಳಿಯ ಮಹಿಳಾ ಸಮಾಜದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು ಕೊಡಗು ಜಿಲ್ಲೆ ಕೋವಿಡ್ ನಿರೋಧಕ ಲಸಿಕೆ ಪಡೆಯುವಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಹೊಂದಿದೆ. ಪ್ರಥಮ ಡೋಸ್ ಪಡೆದವರಲ್ಲಿ ಶೇ.೧೦೦ ಕ್ಕಿಂತ ಹೆಚ್ಚು ಹಾಗೂ ದ್ವಿತೀಯ ಡೋಸ್ ಪಡೆದವರಲ್ಲಿ ಶೇ.೯೪ ರಷ್ಟು ಸಾಧನೆ ಮಾಡಿದೆ ಎಂದರು.

ಭಾರತ ಸರ್ಕಾರದಿಂದ ಲಸಿಕಾ ಅಭಿಯಾನ ಜಾರಿಗೊಳಿಸಿದ್ದು, ಅರ್ಹರೆಲ್ಲರೂ ಲಸಿಕೆ ಪಡೆಯಬೇಕು. ಯಾವುದೇ ಕಾರಣಕ್ಕೂ ಹಿಂಜರಿಯ ಬಾರದೆಂದು ಕಿವಿ ಮಾತನಾಡಿದರು.

ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ರಾಷ್ಟçದಲ್ಲಿ ಮೂರನೇ ಅಲೆ ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ ಇದನ್ನು ತಡೆಯಲು ಅರ್ಹರೆಲ್ಲರೂ ಕೋವಿಡ್ ನಿಯಂತ್ರಣ ಲಸಿಕೆ ಪಡೆಯುವಂತಾಗಬೇಕು ಎಂದು ಕೋರಿದರು.

ಕೋವಿಡ್-೧೯ ನಿಯಂತ್ರಿಸುವಲ್ಲಿ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸಿದೆ. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ. ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಕೋವಿಡ್-೧೯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ತಿಳಿಸಿದರು.

ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ರಾಜ್ಯ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಕೋವಿಡ್-೧೯ ನಿಯಂತ್ರಣ ಸಂಬAಧ ಸರ್ಕಾರ ಕಾಲ ಕಾಲಕ್ಕೆ ಜಾರಿ ಮಾಡುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಕೋರಿದರು.

ಜಿಲ್ಲೆಯಲ್ಲಿ ೧೫ ರಿಂದ ೧೮ ವರ್ಷ ವಯಸ್ಸಿನ ೨೬,೦೪೯ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆರ್.ವೆಂಕಟೇಶ್ ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಡಿಎಚ್‌ಒ ಡಾ.ಆರ್.ವೆಂಕಟೇಶ್, ತಾಲೂಕು ಆರೋಗ್ಯ ಅಧಿಕಾರಿ ಯತಿರಾಜು, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ವಿಜು ಸುಬ್ರಮಣಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಜಿತ್ ಕರುಂಬಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾ, ಡಾ. ಜಗದೀಶ್ ಸೇರಿ ದಂತೆ ಇತರರು ಇದ್ದರು.

೨೦ ಸಾವಿರ ಡೋಸ್ ಲಭ್ಯ

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಹಾಗೂ ಸೋಂಕು ನಿರ್ಮೂಲನೆಯಾಗಿ ೯೦ ದಿನಗಳು ಕಳೆಯದ ಒಟ್ಟು ೫೮ ವಿದ್ಯಾರ್ಥಿಗಳಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಇದೀಗ ಲಸಿಕೆ ನೀಡುವುದಿಲ್ಲ. ವಿದ್ಯಾರ್ಥಿಗಳಿಗೆ ನೀಡಲು ಸುಮಾರು ೨೦,೦೦೦ ದಷ್ಟು ಕೋವ್ಯಾಕ್ಸಿನ್ ಡೋಸ್‌ಗಳು ಲಭ್ಯವಿದ್ದು, ಸದ್ಯದಲ್ಲೇ ಇನ್ನಷ್ಟು ಸರಬರಾಜಾಗಲಿದೆ. ಕೊಮಾರ್ಬಿಡಿಟೀಸ್ (ಬಿ.ಪಿ, ಸಕ್ಕರೆ ಕಾಯಿಲೆ ಇತ್ಯಾದಿ) ಇರುವ ೫೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು, ಇಂತಹ ವಿದ್ಯಾರ್ಥಿಗಳು ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆಯಬೇಕಾಗಿ ಸೂಚಿಸಲಾಗಿದೆ ಎಂದು ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್ ತಿಳಿಸಿದ್ದಾರೆ.

*ಗೋಣಿಕೊಪ್ಪ: ೧೫ರಿಂದ ೧೮ ವರ್ಷದ ಮಕ್ಕಳಿಗೆ ನೀಡುವ ಲಸಿಕೆ ಅಭಿಯಾನಕ್ಕೆ ತಿತಿಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು. ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಕಾಲೇಜಿನ ೨೨ ವಿದ್ಯಾರ್ಥಿ ಹಾಗೂ ೨೨ ವಿದ್ಯಾರ್ಥಿನಿಯರಿಗೆ ಸೇರಿ ಒಟ್ಟು ೪೪ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಲಸಿಕೆ ಪಡೆದುಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮಗಳು ಸಂಭವಿಸುವುದಿಲ್ಲ. ಕೊರೊನ ಹಿಮ್ಮೆಟ್ಟಲು ಲಸಿಕೆ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ. ದೇಶವನ್ನು ಕೊರೊನ ಮುಕ್ತವಾಗಿ ಮಾಡಲು ಕೇಂದ್ರ ಸರ್ಕಾರ ಪಣತೊಟ್ಟಿದ್ದು, ಈ ನಿಟ್ಟಿನಲ್ಲಿ ೧೫ರಿಂದ ೧೮ ವರ್ಷದ ಮಕ್ಕಳಿಗೆ ಲಸಿಕೆ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಪೋಷಕರು ಮಕ್ಕಳ ಮನವೊಲಿಸಿ ಲಸಿಕೆ ಪಡೆದುಕೊಳ್ಳಲು ಹುರಿದುಂಬಿಸಬೇಕೆAದು ತಿತಿಮತಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನೋದ್‌ಕುಮಾರ್ ತಿಳಿಸಿದರು.

ಕಾಲೇಜು ಪ್ರಾಂಶುಪಾಲ ಸರ್ವತ್ತೊಮ, ಪಾಧ್ಯಾಪಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಯ್ಯ, ಕಿರಿಯ ಆರೋಗ್ಯ ಮಹಿಳಾ ಸಹಾಯಕಿ ಮಹಾದೇವಮ್ಮ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಿದ್ದಾಪುರ: ಸಿದ್ದಾಪುರದ ಇಕ್ರಾ ಪಬ್ಲಿಕ್ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್-೧೯ ನಿರೋಧಕ ಲಸಿಕೆಯನ್ನು ಸೋಮವಾರದಂದು ನೀಡಲಾಯಿತು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಇಕ್ರಾ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಕೆ.ಯು. ರಜಾಕ್ ಹಾಜರಿದ್ದರು.

ಸಿದ್ದಾಪುರ: ಚೆಟ್ಟಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೧೫ ರಿಂದ ೧೮ ವರ್ಷ ಪ್ರಾಯದ ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕಳಿಗೆ ಕೋವಿಡ್ ೧೯ ರ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರದಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಗೀತಾ ಇನ್ನಿತರರು ಹಾಜರಿದ್ದರು.

ಆಲೂರು ಸಿದ್ದಾಪುರ: ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ೧೫ ರಿಂದ ೧೮ ವರ್ಷದೊಳಗಿನ ಶಾಲಾ ಮಕ್ಕಳಿಗೆ ಕೋವಿಡ್-೧೯ ಲಸಿಕೆ ಅಭಿಯಾನಕ್ಕೆ ಸೋಮವಾರ ಆಲೂರುಸಿದ್ದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಚಾಲನೆ ದೊರಕಿತು. ಪ್ರೌಢಶಾಲಾ ವಿಭಾಗದ ೧೦ನೇ ತರಗತಿ ಮತ್ತು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಆಲೂರುಸಿದ್ದಾಪುರ ಗ್ರಾ.ಪಂ.ಉಪಾಧ್ಯಕ್ಷೆ ಧಮಯಂತಿ ಕರುಂಬಯ್ಯ ಮತ್ತು ನಾಪೋಕ್ಲು : ಮಾರಕ ರೋಗ ಕೊರೊನಾದಿಂದ ದೂರ ಇರಲು ಪ್ರತಿಯೊಬ್ಬರೂ ಲಸಿಕೆಯನ್ನು ಹಾಕಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಡಾ, ಚಂಗುಲAಡ ಪೂವಯ್ಯ ಅಭಿಪ್ರಾಯಪಟ್ಟರು. ಅವರು ನಾಪೋಕ್ಲು ಪಬ್ಲಿಕ್ ಶಾಲೆಯಲ್ಲಿ ೧೫ ರಿಂದ ೧೮ ರವರೆಗಿನ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈಗ ಮೂರನೇ ಅಲೆಯಲ್ಲಿದೆ; ಇದನ್ನು ತಡೆಗಟ್ಟಲು ಕಡ್ಡಾಯವಾಗಿ ಮಾಸ್ಕ್ ಧರಿಸಬೆಕೆಂದು ಹೇಳಿದ ಅವರು ಸ್ಯಾನಿಟೈಸರ್ ಬಳಸಿ ಕೈಗಳನ್ನು ಸ್ವಚ್ಛಗೊಳಿಸಬೇಕು ಮತ್ತು ಅಂತರವನ್ನು ಕಾಯ್ದುಕೊಳ್ಳುವುದರ ಮೂಲಕ ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮುಂದಾಗಬೇಕು ಆಗ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದರು.

ಅತಿಥಿಯಾಗಿ ಆಗಮಿಸಿದ್ದ ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರು ಉದ್ಘಾಟಿಸಿದರು.

ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣಾನಂದ್ ಅಭಿಯಾನ ಮಹತ್ವದ ಕುರಿತು ಮಾಹಿತಿ ನೀಡಿ ಕೋವಿಡ್ ನಿಯಂತ್ರಣ ಹಾಗೂ ರೋಗ ನಿರೋಧಕ ಶಕ್ತಿ ವೃದ್ಧಿಸುವ ಸಲುವಾಗಿ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆಯನ್ನು ಹಾಕಲಾಗುತ್ತಿದ್ದು ಇದೀಗ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗುತ್ತಿದೆ. ೨೮ ದಿನದ ನಂತರ ಮತ್ತೆ ೨ನೇ ಹಂತದ ಲಸಿಕೆ ಹಾಕಲಾಗುತ್ತದೆ. ಈ ನಿಟ್ಟಿನಲ್ಲಿ ಶಾಲೆಯ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳು ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕೆಂದರು ಮಕ್ಕಳು ಯಾವುದೇ ಆತಂಕ ಪಡಬೇಕಾಗಿಲ್ಲ ಎಂದರು. ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಿದರೆ ಮಾತ್ರ ಕೋವಿಡ್ ನಿಯಂತ್ರಣಗೊಳ್ಳುತ್ತದೆ ಮಕ್ಕಳು ತಮ್ಮ ಮನೆಯಲ್ಲಿ ಪೋಷಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದಲ್ಲಿ ಅವರಿಗೂ ಮನವರಿಕೆ ಮಾಡಿಸುವಂತೆ ಸಲಹೆ ನೀಡಿದರು.

ಕಾಲೇಜಿನ ಹಿರಿಯ ಉಪನ್ಯಾಸಕ ಗಣಪತಿ ಭಟ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಎನ್.ಗಂಗಾಧರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ.ಸದಸ್ಯ ಪಿ.ಎಸ್.ಸತೀಶ್‌ಕುಮಾರ್, ಪ.ಪೂ.ಕಾಲೇಜು ಪ್ರಾಂಶುಪಾಲ ಶಿವಕುಮಾರ್, ಆಸ್ಪತ್ರೆಯ ಪರಿವೀಕ್ಷಕ ಪ್ರವೀಣ್‌ಕುಮಾರ್, ಉಪನ್ಯಾಸಕರಾದ ಮಲ್ಲೇಶ್, ರಮೇಶ್, ಆಸ್ಪತ್ರೆ ಸಿಬ್ಬಂದಿ ಶಿಕ್ಷಕರು ಹಾಜರಿದ್ದರು. ಸದರಿ ಪ್ರೌಢಶಾಲಾ ವಿಭಾಗ ಮತ್ತು ಪ.ಪೂ.ಕಾಲೇಜಿನ ೧೭೦ ಮಂದಿ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನ ನಡೆಯಿತು.ಅಧಿಕಾರಿ ಚೋಂದಕ್ಕಿ ಮಾತನಾಡಿ ಮಕ್ಕಳು ಕೊರೊನಾದಿಂದ ದೂರ ಇರಲು ಸರಕಾರ ವಿಧಿಸಿದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಲಸಿಕೆ ಹಾಕಿಸಿಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಸುಮಾರು ೧೧೫ ಮಕ್ಕಳಿಗೆ ಲಸಿಕೆ ಹಾಕಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಅವನಿಜ ಸೋಮಯ್ಯ ವಹಿಸಿದ್ದರು. ಶಿಕ್ಷಕವೃಂದ, ಅಂಗನವಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರು ಮತ್ತು ಪೋಷಕರು ಇದ್ದರು ಶಿಕ್ಷಕಿ ಉಷಾರಾಣಿ ನಿರೂಪಿಸಿ, ವಂದಿಸಿದರು. ವೀರಾಜಪೇಟೆ: ಹದಿನೈದರಿಂದ ಹದಿನೆಂಟು ವರ್ಷದೊಳಗಿನ ಮಕ್ಕಳಿಗೆ ಕೊರೊನಾ ನಿರೋಧಕ ಲಸಿಕೆ ಅಭಿಯಾನ ವೀರಾಜಪೇಟೆ ತಾಲೂಕಿನಲ್ಲಿ ಇಂದು ಹಲವು ಶಾಲೆಗಳಲ್ಲಿ ಆರಂಭಗೊAಡಿತು.

ವೀರಾಜಪೇಟೆ ಸಮೀಪದ ಕಾಕೋಟು ಪರಂಬು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ಶಾಂತಮಲ್ಲ ಸ್ವಾಮಿ ವಿದ್ಯಾಪೀಠ ಅರಮೇರಿ ಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದರು. ಲಸಿಕಾ ಅಭಿಯಾನವನ್ನು ಉದ್ದೇಶಿಸಿ ಅರಮೇರಿ ಕಳಂಚೇರಿ ಮಠದ ಪೀಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜೀ ಮಾತನಾಡಿ, ಲಸಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೂಕೊಂಡ ಶಶಿ ಸುಬ್ರ‍್ರಮಣ್ಯ ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೂಕೊಂಡ ಉಮೇಶ್ ಅವರು ದೇವಣಗೇರಿ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದರು. ಜನತಾ ಪ್ರೌಢಶಾಲೆ ಹುದಿಕೇರಿಯಲ್ಲಿ ಲಸಿಕಾ ಅಭಿಯಾನವನ್ನು ಗ್ರಾಮಪಂಚಾಯತಿ ಅಧ್ಯಕ್ಷ ಸಿ.ಎಂ. ಚಂದ್ರ ಪ್ರಕಾಶ್ ಅವರು ಉದ್ಘಾಟನೆ ಮಾಡಿದರು ಹಾಗೂ ಖಾಲಿದ್ ಅಹಮ್ಮದ್ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿದರು. ವೀರಾಜಪೇಟೆಯ ತ್ರಿವೇಣಿ ಶಾಲೆಯಲ್ಲಿಯೂ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸಹಕಾರದೊಂದಿಗೆ ಲಸಿಕೆ ನೀಡಲಾಯಿತು.ಶನಿವಾರಸಂತೆ: ಕೊರೊನಾ ಸೂಕ್ಷಾö್ಮಣು ವೈರಸ್‌ನಿಂದ ದೇಶದ ಜನತೆ ತತ್ತರಿಸಿ ಹೋಗಿದ್ದು, ಅಪಾರ ಸಾವು - ನೋವುಗಳಿಗೆ ಕಾರಣವಾಗಿದೆ ಎಂದು ಕಿರಿಕೊಡ್ಲಿ ಮಠಾಧೀಶ ಸದಾಶಿವಸ್ವಾಮೀಜಿ ಅಭಿಪ್ರಾಯಪಟ್ಟರು.

ಸಮೀಪದ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಸದಾಶಿವಸ್ವಾಮಿ ಪ.ಪೂ. ಕಾಲೇಜಿನಲ್ಲಿ ನಡೆದ ೧೫-೧೮ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ -೧೯ ಲಸಿಕಾ ಅಭಿಯಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಂದೆ - ತಾಯಿ, ಬಂಧು ಬಳಗದ ಅಗಲಿಕೆಗೆ ಕಾರಣವಾದ ಕೊರೊನಾ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ೧೦೦ ಕೋಟಿಗೂ ಅಧಿಕ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಂಡು ಬೃಹತ್ ಸಾಧನೆ ಮಾಡಿವೆ. ಪ್ರಸ್ತುತ ೧೫೦ ಕೋಟಿ ಲಸಿಕೆ ನೀಡುವ ಗುರಿ ಹೊಂದಿದ್ದು, ಲಸಿಕೆ ಪಡೆಯುವ ಮೂಲಕ ಕೃತಜ್ಞತೆ ಸಲ್ಲಿಸಬೇಕು ಎಂದರು.

ಪ್ರಾAಶುಪಾಲೆ ತನುಜಾ ಮಾತನಾಡಿ, ಲಸಿಕೆ ಪಡೆದು, ಸರ್ಕಾರದ ಮಾರ್ಗಸೂಚಿಯಂತೆ ನಡೆಯುವ ಮೂಲಕ ಕೊರೊನಾ ವಾರಿಯರ್ಸ್ಗಳಾಗಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು. ಗ್ರಾ ಪಂಚಾಯಿತಿ ಸದಸ್ಯ ಹನೀಫ್, ಆರೋಗ್ಯ ಇಲಾಖೆ ಸಿಬ್ಬಂದಿ ಸರೋಜಾ, ಸೌಮ್ಯ, ಆಶಾ ಕಾರ್ಯಕರ್ತೆಯರಾದ ಅನಿತಾ, ತ್ರಿವೇಣಿ, ಕಲಾವತಿ, ಶಾಹಿದಾ, ಉಪನ್ಯಾಸಕರಾದ ಪ್ರಿಯಾಂಕ, ಚಂದ್ರಶೇಖರ್, ಶಿಕ್ಷಕಿ ಆಶಾ ಉಪಸ್ಥಿತರಿದ್ದರು. ೧೫೨ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.

ಕೂಡಿಗೆ: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸರಕಾರದ ನಿಯಮದಂತೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಇಎಸ್ ಕಿಶೋರ್ ಕೇಂದ್ರದ ಶಾಲೆಯಲ್ಲಿ ಲಸಿಕಾ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ. ತೇಜಸ್ವಿನಿ ಉದ್ಘಾಟಿಸಿದರು.

ತಾಲೂಕು ನಿರೀಕ್ಷಣಾಧಿಕಾರಿ ವಿಶ್ವಜ್ಞ ಮಾಹಿತಿ ನೀಡಿದರು. ತಾಲೂಕು ಮೇಲ್ವಿಚಾರಣಾ ಅಧಿಕಾರಿ ಅಶ್ವಿನಿ, ಶಾಲಾ ಕಾರ್ಯದರ್ಶಿ ಉಮಾಪ್ರಭಾಕರ್, ಮುಖ್ಯ ಶಿಕ್ಷಕ ಪಿ.ಆರ್. ಮಧುಕುಮಾರ್, ಆರೋಗ್ಯ ಸಹಾಯಕರಾದ ಮುಖೇಶ್ ಚಂದ್ರಶ್, ಸಗೀನಾ ಸೇರಿದಂತೆ ಅಶಾ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ನಂತರ ಕೂಡಿಗೆ ವ್ಯಾಪ್ತಿಯ ಅಂಜಲಾ ವಿದ್ಯಾನಿಕೇತನ ಸಂಸ್ಥೆ, ಕೂಡಿಗೆ ಕ್ರೀಡಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.

ಕೂಡಿಗೆ: ಪ್ರಾಥಮಿಕ ಆರೋಗ್ಯ ಕೇಂದ್ರ ಹೆಬ್ಬಾಲೆ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಲಸಿಕಾ ಅಭಿಯಾನ ಶಾಲಾ ಸಭಾಂಗಣದಲ್ಲಿ ನಡೆಯಿತು.

ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೆಚ್.ಎಸ್. ಮಂಜುನಾಥ ಚಾಲನೆ ನೀಡಿದರು. ನಂತರ ಮಾತನಾಡುತ್ತಾ ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಲಸಿಕೆಗಳನ್ನು ತೆಗೆದುಕೊಂಡು ನಮ್ಮ ಗ್ರಾಮ ಪಂಚಾಯಿತಿ ವಲಯವನ್ನು ಕೋವಿಡ್ ಮುಕ್ತವಾಗಿ ಮಾಡುವಲ್ಲಿ ಕೈ ಜೋಡಿಸಬೇಕು ಎಂದು ಮಕ್ಕಳಿಗೆ ಪ್ರೇರಣೆ ನೀಡಿದರು.

ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ, ಭರತ್ ಮಾತನಾಡುತ್ತಾ ನಮ್ಮ ದೇಶ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶವಾದರೂ ಕೂಡ ಬೇರೆ ದೇಶಗಳಿಗೆ ಹೋಲಿಸಿದರೆ ಲಸಿಕಾ ಅಭಿಯಾನದಲ್ಲಿ ಉತ್ತಮ ಸ್ಥಾನದಲ್ಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಚ್ ಎಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹೆಚ್.ಎನ್. ರಮೇಶ್ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್ ಜೋಗಿ, ವಿಶ್ವಜ್ಞ, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ, ತಾಲೂಕು ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಅಶ್ವಿನಿ ಕಾರ್ಯದರ್ಶಿ ಹೆಚ್.ಆರ್. ನಾಗೇಂದ್ರ, ಇಂದಿರಾ ಆರೋಗ್ಯ ಮೇಲ್ವಿಚಾರಕಿ ಇಂದಿರಾ, ಸಂಜಯ್, ಆಶಾ ಕಾರ್ಯಕರ್ತೆಯರು, ಅಧ್ಯಾಪಕ ವರ್ಗದವರು, ಉಪನ್ಯಾಸಕ ವರ್ಗದವರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು. ಎನ್. ವೆಂಕಟ್‌ನಾಯಕ್ ಸ್ವಾಗತಿಸಿ, ಬೋಜೇಗೌಡ ವಂದಿಸಿದರು. ಸಿ.ಡಿ. ಲೋಕೇಶ್ ನಿರೂಪಣೆ ಮಾಡಿದರು. ಪೊನ್ನಂಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೧೫ ವರ್ಷದಿಂದ ೧೮ ವರ್ಷ ವಯೋಮಿತಿಯ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಯಶಸ್ವಿಯಾಯಿತು. ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಖಾಲಿದ್ ಅಹಮದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ ಪಬ್ಲಿಕ್ ಶಾಲೆಯ ೧೬೯ ವಿದ್ಯಾರ್ಥಿಗಳು ಹಾಗೂ ಪದವಿ ಪೂರ್ವ ಕಾಲೇಜಿನ ೧೪೫ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.

ಈ ಸಂದರ್ಭ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಆರ್.ರಮೇಶ್, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಅನ್ ರಿತ್ ಪೊಟ್ರಾಡೋ, ಉಪನ್ಯಾಸಕರು ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು. ಹುದಿಕೇರಿ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಪೊನ್ನಂಪೇಟೆ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಲಸಿಕಾ ಕಾರ್ಯನಿರ್ವಹಿಸಿದರು.

ಗೋಣಿಕೊಪ್ಪ: ೧೫ ರಿಂದ ೧೮ ವರ್ಷಗಳ ಮಕ್ಕಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಗೋಣಿಕೊಪ್ಪಲುವಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಚಾಲನೆ ನೀಡಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯ ಕಳಕಂಡ ಮಹೇಶ್ ಮುಂದಾಳತ್ವದಲ್ಲಿ ಶಾಲೆಯ ೩೭ ವಿದ್ಯಾರ್ಥಿಗಳು ಕೋವ್ಯಾಕ್ಸಿನ್ ಲಸಿಕೆ ಪಡೆದರು.

ಈ ವೇಳೆ ಕುಟ್ಟಂದಿ ಪಿ.ಎಚ್.ಸಿ.ವೈದ್ಯರಾದ ಡಾ.ಕೆ.ಎಸ್.ಅನುಷಾ, ಮಾತನಾಡಿ ಮುಂದಿನ ೨೮ ದಿನಗಳ ನಂತರ ಎರಡನೇ ಲಸಿಕೆ ನೀಡಲಾಗುವುದು ಎಂದರು. ಲಸಿಕೆ ಕಾರ್ಯಕ್ರಮದಲ್ಲಿ ಸುರಕ್ಷಣಾ ಅಧಿಕಾರಿಗಳಾದ ದಮಯಂತಿ ಬಿ.ಆರ್. ಸುಜಾತ, ಸಂಜನಾ, ಆಶಾ ಕಾರ್ಯಕರ್ತೆಯರಾದ ಪ್ರೀಯ, ಸುಮಾ, ವೀಣಾ ಹಾಗೂ ಶಾಲಾ ಶಿಕ್ಷಕರಾದ ಹರಿಣಿ, ಪಾರ್ವತಿ, ವಿದ್ಯಾ, ಸುಮಿ, ಮಂಜುಳ, ಚೇತನ, ಹ್ಯಾಗ್ನೆಸ್ ಮುಂತಾದವರು ಹಾಜರಿದ್ದರು.