ಸೋಮವಾರಪೇಟೆ, ಜ. ೨: ಸಾರ್ವಜನಿಕ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಚ್.ಕೆ.ಪಾಂಡು ಅವರಿಗೆ ಇಲಾಖೆಯ ವತಿಯಿಂದ ಉಪ ನಿರ್ದೇಶಕರ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಉಪ ನಿರ್ದೇಶಕರು (ಅಭಿವೃದ್ಧಿ) ಹಾಗೂ ಸಂಸ್ಥೆಯ ಪ್ರಾಂಶುಪಾಲರ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ. ಕಳೆದ ಎರಡು ವರ್ಷಗಳಿಂದ ತಾಲೂಕಿನಲ್ಲಿ ಬಿಇಓ ಆಗಿ ಇವರು ಸೇವೆ ಸಲ್ಲಿಸುತ್ತಿದ್ದರು.
ಪಾಂಡು ಅವರು ಈ ಹಿಂದೆ ಕೂಡಿಗೆ ಡಯಟ್‌ನಲ್ಲಿ ಹಿರಿಯ ಉಪನ್ಯಾಸಕರಾಗಿ, ನಂತರ ವೀರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಾಗೂ ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.