ಮಡಿಕೇರಿ, ಜ. ೩: ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಿ ಕ್ರೆöÊಸ್ತ ಸಮುದಾಯದ ಮೇಲೆ ದೇಶದಲ್ಲಿ ನಿರಂತರ ಶೋಷಣೆ ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪಾಂಡವಪುರ ತಾಲೂಕು, ಮಂಡ್ಯ ಜಿಲ್ಲೆಯಲ್ಲಿ ದಿನಾಂಕ ೨೨.೧೨.೨೦೨೧ರಂದು ನಿರ್ಮಲ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆ ಮಾಡುವಾಗ ಸುಮಾರು ೨೦ ಜನರಿದ್ದ ಗುಂಪು ಏಕಾಏಕಿಯಾಗಿ ಶಾಲೆಯೊಳಗೆ ನುಗ್ಗಿ ಮತಾಂತರ ಮಾಡುತ್ತಿದ್ದಾರೆಂದು ಶಿಕ್ಷಕರಿಗೆ ಮನಬಂದAತೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಶಾಲೆಯೊಳಗೆ ಶಾರದ ದೇವಿಯ ಫೋಟೋ ಹಾಕಿಲ್ಲವೆಂದು ಗಲಾಟೆ ಮಾಡಿರುವುದು ಖಂಡನೀಯ. ಕೂಡಲೇ ಅವರನ್ನು ಬಂಧಿಸಿ ಕಾನೂನಾತ್ಮಕ ನ್ಯಾಯ ಒದಗಿಸಬೇಕು.
ಗೋಕಾಕ್ ತಾಲೂಕು, ಬೆಳಗಾವಿ ಜಿಲ್ಲೆಯಲ್ಲಿ ಕೆಲ ವ್ಯಕ್ತಿಗಳು ಚರ್ಚ್ ಒಳಗೆ ನುಗ್ಗಿ ಪ್ರಾರ್ಥನೆ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ತಯಾರಾಗಿದ್ದ ಊಟವನ್ನು ಚೆಲ್ಲಿ ದೌರ್ಜನ್ಯವೆಸಗಿರುವ ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು.
ಕ್ರೆöÊಸ್ತ ಸಮುದಾಯದವರ ಪವಿತ್ರ ಚರ್ಚ್ಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯಗಳನ್ನು ತಡೆಯಬೇಕು ಹಾಗೂ ಚರ್ಚ್ಗಳಿಗೆ ಸೂಕ್ತ ಭದ್ರತೆಯನ್ನು ಕಲ್ಪಿಸಬೇಕು.
ಕ್ರೆöÊಸ್ತ ಸಮುದಾಯದವರ ಪವಿತ್ರ ದೇವರಾದ ಏಸುಕ್ರಿಸ್ತರ ಪ್ರತಿಮೆಗಳನ್ನು ಭಗ್ನಗೊಳಿಸುತ್ತಿರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪವಿತ್ರ ಚರ್ಚ್ಗಳಿಗೆ ಬೀಗ ಹಾಕಿ ದೌರ್ಜನ್ಯವೆಸಗಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು.
ಅಮಾಯಕ ಅಲ್ಪಸಂಖ್ಯಾತ ಕ್ರೆöÊಸ್ತ ಮಿಷನರಿ ಪಾದ್ರಿಗಳ ಮೇಲೆ ಆಧಾರ ರಹಿತ ಆರೋಪ ಮಾಡುವುದು ಹಾಗೂ ಕೇಸುಗಳನ್ನು ದಾಖಲಿಸುವುದನ್ನು ತಡೆಯಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾಕಾರರು ಒತ್ತಾಯಿಸಿದ ರಲ್ಲದೆ, ಮತಾಂತರ ನಿಷೇಧ ಕಾಯ್ದೆಯನ್ನು ಖಂಡಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್, ಉಪಾಧ್ಯಕ್ಷ ಸುನಿಲ್ ಡಿಸೋಜ, ನಗರಾಧ್ಯಕ್ಷ ಪೀಟರ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ. ರಾಜೇಶ್, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಖಲೀಲ್ ಬಾಷಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತ್ ಕುಮಾರ್, ರಾಜೀವ್ ಗಾಂಧಿ ಪಂಚಾಯಿತಿ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.