ಸೋಮವಾರಪೇಟೆ,ಜ.೩: ಸಮೀಪದ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿಯಲ್ಲಿ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿಯ ವತಿಯಿಂದ ರೂ. ೫೦ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಗಣಪತಿ, ಶ್ರೀ ಭಗವತಿ ಮತ್ತು ಧರ್ಮಶಾಸ್ತç ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಲೋಕಾರ್ಪಣೆ ಹಾಗೂ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ತಾ. ೫ರಿಂದ (ನಾಳೆಯಿಂದ) ತಾ. ೮ರವರೆಗೆ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ದೇವಾಲಯ ಸಮಿತಿ ಅಧ್ಯಕ್ಷ ಪಿ. ಜಗನ್ನಾಥ್ ಅವರು, ಮೂರು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ನೆರವೇರಲಿದೆ ಎಂದರು.

ದಾನಿಗಳು, ಸರ್ಕಾರ ಮತ್ತು ಧರ್ಮಸ್ಥಳÀ ಗ್ರಾಮಾಭಿವೃದ್ದಿಯ ಯೋಜನೆ ವತಿಯಿಂದ ೫೦ ಲಕ್ಷ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಿಸಲಾಗಿದೆ. ಕೇರಳದ ಕಣ್ಣೂರು ಬ್ರಹ್ಮಶ್ರೀ ಹರಿಕೃಷ್ಣöನ್ ನಂಬೂದರಿ ಆಲಚೇರಿ ಇವರ ಆಚಾರ್ಯತ್ವದಲ್ಲಿ ಶ್ರೀ ಗಣಪತಿ, ಶ್ರೀ ಭಗವತಿ ಮತ್ತು ಧರ್ಮಶಾಸ್ತ ಶ್ರೀ ಅಯ್ಯಪ್ಪಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ. ಆ ಪ್ರಯುಕ್ತ ದಿನಾಂಕ ೫ ರಿಂದ ೮ ರವರೆಗೆ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಭಕ್ತಾದಿಗಳು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಅರಮೇರಿ ಕಳಂಚೇರಿ ಮಠಾಧೀಶರಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮಾಜಿ ಸಚಿವ ಬಿ.ಎ. ಜೀವಿಜಯ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಜಿ.ಪಂ. ಸದಸ್ಯೆ ಕೆ.ಪಿ.ಚಂದ್ರಕಲಾ, ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ದೇವಾಲಯದ ಅಭಿವೃದ್ದಿಗೆ ಧನ ಸಹಾಯ ಮಾಡುವವರು ಅಯ್ಯಪ್ಪ ಸ್ವಾಮಿ ದೇವಾಲಯದ ಹೆಸರಿನಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಖಾತೆ ಸಂಖ್ಯೆ ೧೨೨೯೩೧೦೦೦೦೬೬೬೩ ಐಎಫ್‌ಎಸ್‌ಸಿ ಕೋಡ್ ಪಿಕೆಜಿಬಿ೦೦೧೨೨೯೩ ಇಲ್ಲಿಗೆ ಪಾವತಿ ಮಾಡಬಹುದು. ದೇವಾಲಯದಲ್ಲಿ ನಾಲ್ಕು ದಿನವೂ ಭಕ್ತಾಧಿಗಳಿಗೆ ಅನ್ನದಾನ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ೮೨೭೭೨೩೪೮೮೯ ಸಂಪರ್ಕಿಸಬಹುದು ಎಂದು ಜಗನ್ನಾಥ್ ಮನವಿ ಮಾಡಿದರು.

ಗೋಷ್ಠಿಯಲ್ಲಿ ದೇವಾಲಯ ಸಮಿತಿ ಉಪಾಧ್ಯಕ್ಷ ಕೆ.ಎ.ಬಾಬು, ಖಜಾಂಚಿ ಬಿ.ಬಿ. ಗಂಗಾಧರ, ಸಹ ಕಾರ್ಯದರ್ಶಿ ಪಿ.ಬಿ. ಸುರೇಶ್ ಅವರುಗಳು ಉಪಸ್ಥಿತರಿದ್ದರು.