ಮಡಿಕೇರಿ, ಜ. ೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟಿçÃಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಸೋಮವಾರ ನಡೆದ ೧೫ ರಿಂದ ೧೮ ವರ್ಷ ವಯೋಮಾನದ ಮಕ್ಕಳಿಗೆ ಕೋವಿಡ್-೧೯ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಕಳೆದ ಎರಡು ವರ್ಷಗಳಿಂದ ಶಾಲಾ-ಕಾಲೇಜುಗಳು ನಡೆಯದೆ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ತೊಂದರೆಯಾಗಿದೆ. ಶಾಲೆಯಲ್ಲಿ ಕಲಿಯುವುದಕ್ಕೂ ಹಾಗೂ ಆನ್‌ಲೈನ್ ಪಾಠ ಕೇಳುವುದಕ್ಕೂ ಅಜಗಜಾಂತರ ವ್ಯತ್ಯಾಸವಿದ್ದು, ಆ ನಿಟ್ಟಿನಲ್ಲಿ ಕೋವಿಡ್-೧೯ ತೊಲಗಿಸಲು ೧೫ ರಿಂದ ೧೮ ವರ್ಷದ ವಿದ್ಯಾರ್ಥಿಗಳು ಲಸಿಕೆ ಪಡೆಯುವಂತಾಗಬೇಕು ಎಂದು ಕೋರಿದರು.
ದೇಶ, ರಾಷ್ಟç ಅಭಿವೃದ್ಧಿ ಯಾಗಬೇಕಾದರೆ ಪ್ರತಿಯೊಬ್ಬರೂ ಆರೋಗ್ಯಯುತರಾಗಿರಬೇಕು. ಸರ್ಕಾರ ಕೋವಿಡ್-೧೯ ನಿಯಂತ್ರಿಸುವಲ್ಲಿ ಮೊದಲು ೬೦ ವರ್ಷ ಮೇಲ್ಪಟ್ಟವರಿಗೆ, ನಂತರ ೪೫ ವರ್ಷ ಮೇಲ್ಪಟ್ಟವರಿಗೆ ಬಳಿಕ ೧೮ ವರ್ಷ ಮೇಲ್ಪಟ್ಟವರಿಗೆ ಈಗ ೧೫ ರಿಂದ ೧೮ ವರ್ಷದ ಮಕ್ಕಳಿಗೆ ಕೋವಿಡ್-೧೯ ನಿಯಂತ್ರಣ ಲಸಿಕೆ ನೀಡಲಾಗುತ್ತಿದೆ ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ.ಚೇತನ್ ಪ್ರಾಸ್ತಾವಿಕವಾಗಿ ಮಾತನಾಡಿ ಲಸಿಕೆ ಪಡೆಯುವ ನಿಟ್ಟಿನಲ್ಲಿ ಭಯಪಡುವ ಅಗತ್ಯವಿಲ್ಲ. ೧೫ ರಿಂದ ೧೮ ವರ್ಷ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ಪಡೆದವರು ೨೮ ದಿನದ ನಂತರ ಎರಡನೇ ಡೋಸ್ ಲಸಿಕೆ ಪಡೆಯಬೇಕು ಎಂದು ತಿಳಿಸಿದರು. ಮಡಿಕೇರಿ ತಾಲೂಕಿನಲ್ಲಿ ೧೫ ರಿಂದ ೧೮ ವರ್ಷದ ೬,೭೩೫ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಅವರು ಹೆಳಿದರು.
ಕೊರೊನಾ ಮಹಾಮಾರಿ ತಡೆಯಲು ಎಲ್ಲರೂ ಸಹಕರಿಸಬೇಕು. ಕೋವಿಡ್-೧೯ ಸಂಬAಧಿಸಿದAತೆ ಭಯಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಚೇತನ್ ವಿವರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ ಕೋವಿಡ್-೧೯ ವಿರುದ್ಧ ಹೋರಾಡಲು ಸ್ಯಾನಿಟೈಸ್ ಮಾಡುವುದು, ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದರು. ಮಕ್ಕಳ ಬೌದ್ಧಿಕ ಮತ್ತು ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಲು ಸರ್ಕಾರದ ನಿಯಮವನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಮಹೇಶ್ ಮಾತನಾಡಿ ೧೫ ರಿಂದ ೧೮ ವರ್ಷದ ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೋರಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಪೊನ್ನಚನ, ಕಾಲೇಜಿನ ಪ್ರಾಂಶುಪಾಲ ವಿಜಯ, ಮುಖ್ಯೋಪಾಧ್ಯಾಯಿನಿ ನಳಿನಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಆಯುಕ್ತ ಜಿಮ್ಮಿ ಸೀಕ್ವೇರಾ, ರಾಷ್ಟಿçÃಯ ಆರೋಗ್ಯ ಅಭಿಯಾನದ ದೇವರಾಜು ಇತರರು ಇದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.