ಮಡಿಕೇರಿ, ಜ. ೩: ಜಿಲ್ಲೆಯಲ್ಲಿ ಸೋಮವಾರ ೯ ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆೆ.
ಮಡಿಕೇರಿ ತಾಲೂಕಿನಲ್ಲಿ ೩, ವೀರಾಜಪೇಟೆ ತಾಲೂಕಿನಲ್ಲಿ ೩, ಸೋಮವಾರಪೇಟೆ ತಾಲೂಕಿನಲ್ಲಿ ೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆÉ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೯೮೩ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೫,೩೬೯ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೮ ಮರಣ ಪ್ರಕರಣಗಳು ವರದಿಯಾಗಿವೆÉ. ೧೭೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೩೭ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೩.೮೯ ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.