ಕೂಡಿಗೆ, ಜ. ೪: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಸಮೀಪದ ಜೇನುಕಲ್ಲು ಬೆಟ್ಟ ಗ್ರಾಮದಲ್ಲಿರುವ ಶ್ರೀ ಉದ್ಭವ ಕಾಡು ಬಸವೇಶ್ವರ ದೇವಾಲಯದ ಅವರಣದಲ್ಲಿ ತಾ. ೯ ರಂದು ಮಂಡಲ ಪೂಜಾ ಕಾರ್ಯಕ್ರಮ ನಡೆಯಲಿದೆ.
ಇದರ ಅಂಗವಾಗಿ ಬೆಳಿಗ್ಗೆ ೬ ಗಂಟೆಗೆ ಶ್ರೀ ಗಣಪತಿ ಹೋಮ, ರುದ್ರಹೋಮ ಮಹಾ ರುದ್ರಾಭಿಷೇಕ, ಅಷ್ಟೋತ್ತರ, ತೀರ್ಥ ಪ್ರಸಾದ ನಡೆಯಲಿದೆ.
ನಂತರ ೧೧ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಕೆ.ಸಿ. ನಂಜುAಡ ಸ್ವಾಮಿ ತಿಳಿಸಿದ್ದಾರೆ.
ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹುಣಸೂರು ತಾಲೂಕಿನ ಗೌಡಗೆರೆ ಶ್ರೀ ಗುರು ಜಂಗಮದೇವರ ಮಠದ ಶ್ರೀ ನಟರಾಜ ಸ್ವಾಮಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸೆÀ್ಯ ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ ಅಗಮಿಸಲಿದ್ದಾರೆ. ೧೨.೩೦ ಗಂಟೆಗೆ ಮಹಾಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ತಿಳಿಸಿದ್ದಾರೆ.