ಅಂಗಡಿ ಆರಂಭಕ್ಕೆ ಅನುಮತಿ

ಮಡಿಕೇರಿ, ಜ. ೪ : ತಾಲೂಕಿನ ಕುಂದಚೇರಿ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯುವ ಹಿನ್ನೆಲೆ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಷರತ್ತುಗಳಿಗೆ ಒಳಪಟ್ಟು, ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ನ್ಯಾಯಬೆಲೆ ಅಂಗಡಿ (ಅಗತ್ಯ ವಸ್ತುಗಳಾದ ಅಕ್ಕಿ, ಗೋಧಿ ಹಾಗೂ ಆಗಿಂದಾಗ್ಗೆ ಇಲಾಖೆಯಿಂದ ಸೂಚಿಸಲ್ಪಡುವ ಆಹಾರ ಧಾನ್ಯಗಳ ಮಾರಾಟಕ್ಕಾಗಿ) ತೆರೆಯುವ ಅಗತ್ಯವಿದೆ. ಆ ದಿಸೆಯಲ್ಲಿ ಕುಂದಚೇರಿ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ನ್ಯಾಯಬೆಲೆ ಅಂಗಡಿ ಪ್ರಾಧಿಕಾರ ಅನುಮತಿ ನೀಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.