ಕುಶಾಲನಗರ, ಜ. ೪: ಕುಶಾಲನಗರ ತಾಲೂಕು ನಾಮಧಾರಿ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಸ್ಥಳೀಯ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಹೆಚ್.ಹೆಚ್. ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಸಂಘದ ಉಪಾಧ್ಯಕ್ಷ ವಿಜಿ ದಿನೇಶ್, ಕಾರ್ಯದರ್ಶಿ ಬಿ.ಎಸ್. ನಾಗರಾಜು, ಗೌರವಾಧ್ಯಕ್ಷ ಹೆಚ್.ಎಸ್. ಅಶೋಕ್, ಜಂಟಿ ಕಾರ್ಯದರ್ಶಿ ಬಿ.ಎಂ. ಸಂತೋಷ್ ಕುಮಾರ್ ಮತ್ತು ನಿರ್ದೇಶಕರುಗಳು ಇದ್ದರು.