ಸಿದ್ದಾಪುರ, ಜ. ೪: ಬಿಜೆಪಿ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಮುಂದಾಗಬೇಕೆAದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿ.ಕೆ. ಲೋಕೇಶ್ ಕರೆ ನೀಡಿದರು. ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ಸಭಾಂಗಣದಲ್ಲಿ ನೆಲ್ಲಿಹುದಿಕೇರಿಯ ಬಿಜೆಪಿ ಶಕ್ತಿಕೇಂದ್ರ ಹಾಗೂ ಬಿಜೆಪಿ ಯುವ ಮೋರ್ಚಾದ ವತಿಯಿಂದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟç ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷವು ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕೂಡ ಜಯಭೇರಿ ಬಾರಿಸಿದೆ.
ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಸಂದರ್ಭದಲ್ಲಿ ಕಾರ್ಯಕರ್ತರು ಪಕ್ಷ ಸಂಘಟಿಸಿ ಬಲಪಡಿಸಬೇಕೆಂದು ಸಲಹೆ ನೀಡಿದರು. ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಕಾರ್ಯಕರ್ತರು ಪಾಲಿಸಿಕೊಂಡು ಉತ್ತಮ ರೀತಿಯಲ್ಲಿ ಪಕ್ಷವನ್ನು ಸಂಘಟಿಸಬೇಕೆAದರು.
ಸೋಮವಾರಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಮಾತನಾಡಿ, ಬೂತ್ ಅಧ್ಯಕ್ಷರುಗಳು ಆಯಾ ಗ್ರಾಮದ ಬೂತ್ ಮಟ್ಟದಲ್ಲಿ, ಪಕ್ಷವನ್ನು ಬಲಪಡಿಸಲು ಶ್ರಮವಹಿಸ ಬೇಕೆಂದರು. ಇತ್ತೀಚೆಗೆ ನಡೆದ ಗ್ರಾ.ಪಂ.ಗಳ ಉಪಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಬೆಂಬಲಿತರು ಗೆಲುವು ಸಾಧಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಹಾಗೂ ಗ್ರಾಮ ಮಟ್ಟದಲ್ಲಿ ಸಂಬAಧಪಟ್ಟ ತಾಲೂಕು ಅಧಿಕಾರಿಗಳನ್ನು ಗ್ರಾಮಕ್ಕೆ ಕರೆಸಿ ಸಮಸ್ಯೆಗಳ ಗಮನ ಸೆಳೆಯಬೇಕೆಂದು ಕಿವಿಮಾತು ಹೇಳಿದರು. ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಮಾತನಾಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಲಿಹುದಿಕೇರಿ ಶಕ್ತಿಕೇಂದ್ರ ಅಧ್ಯಕ್ಷ ಕಡೀರ ಬೆಳ್ಯಪ್ಪ ವಹಿಸಿದ್ದರು. ಬಿಜೆಪಿ ಪಕ್ಷದ ಪದಾಧಿಕಾರಿಗಳಾದ ಚಂದ್ರಶೇಖರ್ ಹೇರೂರು, ಮೋಕ್ಷಿತ್, ಪ್ರಸಾದ್ ಚಂಗಪ್ಪ, ಕೃಷ್ಣಪ್ಪ, ಪಿ.ಸಿ. ಅಚ್ಚಯ್ಯ, ಟಿ.ಬಿ. ತಿಮ್ಮಯ್ಯ ಇನ್ನಿತರರು ಹಾಜರಿದ್ದರು. ಶರಣ್ ಪ್ರಕಾಶ್ ಸ್ವಾಗತಿಸಿ ಪದ್ಮನಾಭ ನಿರೂಪಿಸಿ ಸಚಿನ್ ವಂದಿಸಿದರು.