ಮಡಿಕೇರಿ, ಜ. ೪: ಮದ್ಯಪಾನ ಮಾಡಿ ಅಂಬ್ಯುಲೆನ್ಸ್ ಚಾಲನೆ ಮಾಡಿ ರೋಗಿಯ ಸಾವಿಗೆ ಕಾರಣನಾಗಿದ್ದ ಚಾಲಕನನ್ನು ಅಮಾನತ್ತುಗೊಳಿಸಿ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಆದೇಶಿಸಿದ್ದಾರೆ.

ಇತ್ತೀಚೆಗೆ ರೋಗಿಯೊಬ್ಬರನ್ನು ಸೋಮವಾರಪೇಟೆಯಿಂದ ಬೆಂಗಳೂರಿಗೆ ಚಿಕಿತ್ಸೆಗೆಂದು ಆ್ಯಂಬ್ಯುಲೆನ್ಸ್ನಲ್ಲಿ ಕೊಂಡೊಯ್ಯುವ ಸಂದರ್ಭ ಚಾಲಕ ಕೆ.ಎನ್. ನಂಜಪ್ಪ ಪಾನಮತ್ತನಾಗಿ ವಾಹನ ಚಲಾಯಿಸಿದಲ್ಲದೆ ಹುಣಸೂರಿನಲ್ಲಿ ನಿಲ್ಲಿಸಿದ್ದಾನೆ. ಇದರಿಂದ ರೋಗಿ ಮೃತಪಟ್ಟಿದ್ದು, ಕರ್ತವ್ಯದ ಅವಧಿಯಲ್ಲಿ ನಿರ್ಲಕ್ಷö್ಯತೆ ಹಾಗೂ ಬೇಜವಾಬ್ದಾರಿ ತೋರಿದ್ದಾರೆ ಎಂದು ಸಾಬೀತಾಗಿದೆ. ಆದ್ದರಿಂದ ಚಾಲಕನನ್ನು ಅಮಾನತ್ತು ಮಾಡಲಾಗಿದೆ ಎಂದು ಆದೇಶದಲ್ಲಿ ವೈದ್ಯಾಧಿಕಾರಿ ತಿಳಿಸಿದ್ದಾರೆ.