ಕೂಡಿಗೆ, ಜ.೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾಗಿ ಬಡ್ತಿ ಹೊಂದಿರುವ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು ಅವರನ್ನು ಸನ್ಮಾನಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಸನ್ಮಾನಿತರಾದ ಬಿಇಓ ಪಾಂಡು ಹಾಗೂ ಇತರರಿಗೆ ಕನ್ನಡ ಪುಸ್ತಕಗಳನ್ನು ನೀಡಿದರು. ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್.ಪಲ್ಲೇದ್, ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಟಿ.ದಯಾನAದ ಪ್ರಕಾಶ್, ಸಿ ಆರ್ ಪಿ ಎಸ್.ಆರ್.ಶಿವಲಿಂಗ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಡಿ.ರಮೇಶ್, ಕಚೆೆÃರಿ ಸಿಬ್ಬಂದಿ ಎಂ.ಉಷಾ, ಸಹಾಯಕಿ ಚಂದ್ರಮ್ಮ, ಬಿ.ಎಡ್., ಪ್ರಶಿಕ್ಷಣಾರ್ಥಿ ಮೋಕ್ಷಿತ್ ಇದ್ದರು.