ಮೂರ್ನಾಡು: ಮೂರ್ನಾಡು ಪದವಿಪೂರ್ವ ಕಾಲೇಜಿನ ಜೀವಶಾಸ್ತç ವಿಭಾಗದ ಉಪನ್ಯಾಸಕಿಯಾಗಿ ೩೧ ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಾಚರಣಿಯಂಡ ಮಮತಾ ನಾಣಯ್ಯ ಅವರಿಗೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ, ಉಪನ್ಯಾಸಕ ವೃಂದದವರು ತಾ. ೩ ರಂದು ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿದ್ದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮಮತಾ ಅವರು, ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು, ಅದನ್ನು ಶ್ರದ್ಧೆಯಿಂದ ನಿರ್ವಹಿಸಬೇಕು. ಭಾರತದ ಭಾವಿ ಪ್ರಜೆಗಳನ್ನು ನಿರ್ಮಿಸುವ ಕಾರ್ಯವನ್ನು ಕೈಗೊಂಡ ನಾವು ಅತ್ಯಂತ ಜವಾಬ್ದಾರಿಯುತವಾಗಿ ವಿದ್ಯಾರ್ಥಿಗಳೊಂದಿಗೆ ನಡೆದುಕೊಳ್ಳಬೇಕು ಎಂದು ನುಡಿದರು.ಸೋಮವಾರಪೇಟೆ: ಸಮೀಪದ ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೨ ವರ್ಷಗಳ ಕಾಲ ಸೇವೆ ಸಲ್ಲಿಸಿ, ಇದೀಗ ವರ್ಗಾವಣೆಯಾದ ಮುಖ್ಯ ಶಿಕ್ಷಕ ಟಿ.ಜೆ. ವೆಂಕಟೇಶ್ ಅವರನ್ನು ಸಿದ್ದಾರ್ಥನಗರ ಮಾನವತಾ ಯುವಕ ಸಂಘದ ಸದಸ್ಯರು ಗ್ರಾಮದ ಅಂಬೇಡ್ಕರ್ ಭವನದಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು.
ಯುವಕ ಸಂಘದ ಅಧ್ಯಕ್ಷ ಬಿ.ಕೆ. ನವೀನ್ ಕುಮಾರ್, ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ. ದೇವರಾಜು, ಪ್ರಮುಖರಾದ ದಿಲೀಪ್ ಕುಮಾರ್, ಲಿಂಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.ಕೂಡಿಗೆ: ರಂಗಸಮುದ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಉಷಾ ಎಂಬವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಟಿ. ಕೇಶವ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಂಜುನಾಥ್, ತಾಲೂಕು ಅಧ್ಯಕ್ಷ ಬಸವರಾಜು, ಶಾಲಾ ಮುಖ್ಯ ಶಿಕ್ಷಕಿ ಜಯಂತಿ, ಶಿಕ್ಷಕರಾದ ಸುನಿತಾ, ವೀಣಾ, ರಜನಿ, ಜೆಶೀಲಾ, ಕುಂಞಮ್ಮ, ನಿವೃತ್ತ ಶಿಕ್ಷಕಿ ಮೀನಾಕ್ಷಿ, ಸುಮಿತಾ ಮತ್ತಿತರರು ಇದ್ದರು.