ಮಡಿಕೇರಿ, ಜ. ೪: ವಿಕೆತ್ರಿ ಪಿಕ್ಚರ್ಸ್ ನಿರ್ಮಾಣದ, ಹಿರಿಯ ಸಾಹಿತಿ ನಾಗೇಶ್ ಕಾಲೂರು ಕಾದಂಬರಿ ಆಧಾರಿತ, ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಲನಚಿತ್ರ ೨೭ನೇ ಕೊಲ್ಕತ್ತಾ ಅಂತರರಾಷ್ಟಿçÃಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
ವಿಶ್ವದ ವಿವಿಧ ದೇಶಗಳ ಸಂಸ್ಕೃತಿ ಮತ್ತು ಆಚಾರ, ವಿಚಾರಗಳನ್ನು ಪ್ರತಿಬಿಂಬಿಸುವ ಚಲನಚಿತ್ರಗಳ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡುತ್ತಿರುವ ಅಂತರರಾಷ್ಟಿçÃಯ ಚಲನಚಿತ್ರೋತ್ಸವಕ್ಕೆ ಕರ್ನಾಟಕ ರಾಜ್ಯದಿಂದ ಕೊಡವ, ತುಳು ಮತ್ತು ಕೊಂಕಣಿ ಭಾಷೆಯ ಮೂರು ಚಿತ್ರಗಳಷ್ಟೇ ಆಯ್ಕೆಯಾಗಿವೆ. ಇದೇ ತಾ. ೭ ರಿಂದ ೧೪ ರವರೆಗೆ ಚಲನಚಿತ್ರೋತ್ಸವ ನಡೆಯಲಿದ್ದು, ತಾ. ೧೧ ರಂದು ರಬೀಂದ್ರ ಸದನ್ ಥಿಯೇಟರ್‌ನಲ್ಲಿ “ನಾಡ ಪೆದ ಆಶಾ” ಪ್ರದರ್ಶನಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ತಿಳಿಸಿದ್ದಾರೆ. ಒಂದು ವಾರ ವಿಶ್ವದ ಸುಮಾರು ೩೮೪ ಚಿತ್ರಗಳು ಪ್ರದರ್ಶನಗೊಳ್ಳುತ್ತಿದ್ದು, ಕೊಡವ ಚಲನಚಿತ್ರವೊಂದು ಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವೆಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.