ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ?
ನವದೆಹಲಿ, ಜ. ೪: ದೆಹಲಿಯಲ್ಲಿ ಮಹಾಮಾರಿ ಓಮಿಕ್ರಾನ್ ರೂಪಾಂತರದ ಪರಿಣಾಮ ಕೊರೊನಾ ವೈರಸ್ ಪ್ರಕರಣಗಳು ಅತ್ಯಂತ ವೇಗವಾಗಿ ಹರಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮಂಗಳವಾರ ರಾಷ್ಟç ರಾಜಧಾನಿಯಲ್ಲಿ ವಾರಾಂತ್ಯದಲ್ಲಿ ಕರ್ಫ್ಯೂ ವಿಧಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಅಗತ್ಯ ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಅಲ್ಲದೆ ೫೦ ರಷ್ಟು ಸಾಮರ್ಥ್ಯದೊಂದಿಗೆ ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದಿದ್ದಾರೆ. ದೆಹಲಿಯಲ್ಲಿ ಸೋಮವಾರ ೪,೦೯೯ ಹೊಸ ಕೋವಿಡ್-೧೯ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ಪ್ರಮಾಣ ಶೇ ೬.೪೬ ಕ್ಕೆ ಏರಿದೆ. ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರವು ನಗರದಲ್ಲಿ ಸೋಂಕಿನ ಉಲ್ಬಣಕ್ಕೆ ಕಾರಣವಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾದರೆ ಮತ್ತಷ್ಟು ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಹೇಳಿದ್ದಾರೆ. ಡಿಡಿಎಂಎ-ಅನುಮೋದಿತ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಜಿಆರ್‌ಎಪಿ) ಪ್ರಕಾರ, ಸತತ ಎರಡು ದಿನಗಳವರೆಗೆ ಶೇಕಡಾ ಐದಕ್ಕಿಂತ ಹೆಚ್ಚಿನ ಪಾಸಿಟಿವ್ ಪ್ರಮಾಣ ಬಂದರೆ ‘ರೆಡ್ ಅಲರ್ಟ್' ಘೋಷಿಸುವ ಮಾನದಂಡಗಳಲ್ಲಿ ಒಂದಾಗಿದೆ. ರೆಡ್ ಅಲರ್ಟ್ ಘೋಷಿಸಿದರೆ ಸಂಪೂರ್ಣ ಕರ್ಫ್ಯೂ ಮತ್ತು ರಾಜಧಾನಿಯಲ್ಲಿ ಹೆಚ್ಚಿನ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ.
‘ಬುಲ್ಲಿ ಬಾಯಿ' ಆ್ಯಪ್ ಪ್ರಕರಣ-ಆರೋಪಿ ಬಂಧನ
ಮುAಬೈ, ಜ. ೪: ಮುಂಬೈ ಸೈಬರ್ ಪೊಲೀಸರು ‘ಬುಲ್ಲಿ ಬಾಯಿ' ಆ್ಯಪ್ ಪ್ರಕರಣದ ಪ್ರಮುಖ ಆರೋಪಿ ಎಂದು ನಂಬಲಾದ ಮಹಿಳೆಯನ್ನು ಉತ್ತರಾಖಂಡದಿAದ ಬಂಧಿಸಿದ್ದಾರೆ ಮತ್ತು ಇದೇ ಪ್ರಕರಣ ಸಂಬAಧ ಬೆಂಗಳೂರಿನ ಇಂಜಿನಿಯರಿAಗ್ ವಿದ್ಯಾರ್ಥಿಯನ್ನು ಸಹ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ನಿವಾಸಿಯಾಗಿರುವ ವಿಶಾಲ್ ಕುಮಾರ್‌ನನ್ನು ಸೋಮವಾರ ಸಂಜೆ ಮುಂಬೈಗೆ ವಿಚಾರಣೆಗೆ ಕರೆತರಲಾಗಿದೆ. ಇಬ್ಬರೂ ವ್ಯಕ್ತಿಗಳು ಪರಸ್ಪರ ಪರಿಚಿತರಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮುಂಬೈ ಪೊಲೀಸರು ಬಂಧಿತನ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯ ಸಂಬAಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಪೊಲೀಸರು ಗಿಟ್‌ಹಬ್ ಪ್ಲಾಟ್‌ಫಾರ್ಮ್ ಹೋಸ್ಟ್ ಮಾಡಿದ ‘ಬುಲ್ಲಿ ಬಾಯ್' ಅಪ್ಲಿಕೇಶನ್‌ನಲ್ಲಿ ತಿರುಚಲ್ಪಟ್ಟ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್‌ಲೋಡ್ ಮಾಡಿ ಹರಾಜು ಹಾಕಲಾಗಿದೆ ಎಂಬ ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
ಕೋವಿಡ್ ನಿಯಂತ್ರಣಕ್ಕೆ ಗಡಿಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪನೆ
ಕಲಬುರಗಿ, ಜ. ೪: ಮಹಾರಾಷ್ಟç ಮತ್ತು ಕೇರಳದಲ್ಲಿ ಕೋವಿಡ್-೧೯ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್ಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂತಹ ಚೆಕ್‌ಪೋಸ್ಟ್ಗಳ ಹೊಣೆಯನ್ನು ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳು ವಹಿಸಿಕೊಳ್ಳುತ್ತವೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ನೆರೆಯ ರಾಜ್ಯಗಳಲ್ಲಿ ಕೋವಿಡ್-೧೯ ಪ್ರಕರಣಗಳು ಹೆಚ್ಚಾದಾಗ ನಮ್ಮ ರಾಜ್ಯದಲ್ಲೂ ಸೋಂಕು ಹೆಚ್ಚಾದುದ್ದನ್ನು ಕೋವಿಡ್ ಮೊದಲ ಹಾಗೂ ಎರಡನೇ ಅಲೆಯ ವೇಳೆ ಅನುಭವವಾಗಿದೆ. ಆದ್ದರಿಂದ ಗಡಿ ಪ್ರದೇಶಗಳ ಕಡೆಗೆ ಗಮನ ಹರಿಸಲಾಗುವುದು ಎಂದರು. ಗಡಿ ಪ್ರದೇಶಗಳಲ್ಲಿ ಸಡಿಲತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು, ಅಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು, ಅವುಗಳ ಹೊಣೆಯನ್ನು ಆಯಾ ಪೊಲೀಸ್ ಠಾಣೆಗಳೇ ವಹಿಸಿಕೊಳ್ಳುವಂತೆ ನಿರ್ದೇಶಿಸಲಾಗುವುದು ಎಂದು ಅವರು ತಿಳಿಸಿದರು.
ಸಿಲಿಂಡರ್ ಸ್ಫೋಟ-೭ ಮಂದಿಗೆ ಗಾಯ, ಓರ್ವ ಮಹಿಳೆ ಗಂಭೀರ
ಬೆAಗಳೂರು, ಜ. ೪: ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದ್ದು, ದುರ್ಘಟನೆಯಲ್ಲಿ ೭ ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಪರಿಸ್ಥಿತಿ ಗಂಭೀರವಾಗಿದೆ. ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ತಿಗುಪ್ಪೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ೭ ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸುಕುಮಾರ್ (೪೮), ಹರ್ಷಾ (೪೧), ಗಾನಶ್ರೀ (೧೩), ಹೇಮೇಶ್ವರ್ (೭), ಮನೆ ಮಾಲೀಕರಾದ ರಾಮಕ್ಕ (೬೫), ಅನಿತಾ (೩೧) ಹಾಗೂ ರಚನಾ (೨೧) ಗಾಯಗೊಂಡಿದ್ದು, ಈ ಪೈಕಿ ರಾಮಕ್ಕ ಸ್ಥಿತಿ ಗಂಭೀರವಾಗಿದೆ. ಎಲ್ಲರನ್ನೂ ರಾಜಾಜಿನಗರದ ಇಎಸ್‌ಐ ಹಾಗೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ತಿಗುಪ್ಪೆ ೨ನೇ ತಿರುವಿನಲ್ಲಿರುವ ಮನೆಯಲ್ಲಿ ಸೋಮವಾರ ರಾತ್ರಿ ೮.೪೫ರ ಸುಮಾರಿಗೆ ಸ್ಫೋಟವಾಗಿದೆ. ಮನೆಯ ನೆಲ ಮಹಡಿಯಲ್ಲಿ ವಾಸವಿದ್ದ ಹರ್ಷಾ ಎಂಬುವರು ಆಹಾರ ಬಿಸಿ ಮಾಡಲು ಅಡುಗೆ ಕೋಣೆಗೆ ಹೋಗಿದ್ದಾಗ ಸಿಲಿಂಡರ್‌ನಿAದ ಅನಿಲ ಸೋರಿಕೆಯಾಗುತ್ತಿರುವುದು ಗೊತ್ತಾಗಿದೆ. ಕೂಡಲೇ ಅವರು ಮನೆಯವರಿಗೆಲ್ಲಾ ಮಾಹಿತಿ ನೀಡಿದ್ದು ಎಲ್ಲರೂ ಹೊರಗೆ ಓಡಿ ಬಂದಿದ್ದಾರೆ. ಈ ವೇಳೆ ದೇವರ ಮನೆಯಲ್ಲಿ ಇಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿಯ ಜ್ವಾಲೆ ಕೊಠಡಿಯಲ್ಲೆಲ್ಲಾ ವ್ಯಾಪಿಸಿದೆ. ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಈ ವೇಳೆ ಅಲ್ಲಿದ್ದ ೭ ಮಂದಿಗೆ ಸುಟ್ಟ ಗಾಯಗಳಾಗಿವೆ. ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ ಎಂದು ಹೇಳಿದ್ದಾರೆ.