ಮಡಿಕೇರಿ, ಜ. ೪: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕುಶಾಲನಗರದ ಪತ್ರಕರ್ತೆ ವನಿತಾ ಚಂದ್ರಮೋಹನ್ ಅವರು ನೇಮಕಗೊಂಡಿದ್ದಾರೆ.

ಪರಿಷತ್ತಿನ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ಅವರು ರಾಜ್ಯದ ೩೭ ಶೈಕ್ಷಣಿಕ ಜಿಲ್ಲೆಗಳಲ್ಲಿ ಅಧ್ಯಕ್ಷರ ಆಯ್ಕೆಮಾಡಿದ್ದು, ಕೊಡಗು ಜಿಲ್ಲೆಯ ಅಧ್ಯಕ್ಷರಾಗಿ ವನಿತಾ ಚಂದ್ರಮೋಹನ್ ಅವರನ್ನು ಆಯ್ಕೆ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಷತ್ತಿನಲ್ಲಿ ರಾಜ್ಯದಲ್ಲಿ ಇದುವರೆಗೆ ೩೭ ಸಾವಿರಕ್ಕೂ ಅಧಿಕ ಸದಸ್ಯರು ನೋಂದಾಯಿತರಾಗಿದ್ದು ಕೊಡಗು ಜಿಲ್ಲೆಯಲ್ಲಿ ೫ ತಾಲೂಕು ಅಧ್ಯಕ್ಷರನ್ನು ಆಯ್ಕೆ ಮಾಡುವ ಮೂಲಕ ಸದಸ್ಯರ ನೋಂದಾವಣೆ ಪ್ರಕ್ರಿಯೆ ನಡೆಸುವಂತೆ ತಿಳಿಸಿದ್ದಾರೆ.