ಮಡಿಕೇರಿ, ಜ. ೪: ನೇತಾಜಿ ಯುವಕ ಹಾಗೂ ಯುವತಿ ಮಂಡಲ, ತಾಳತ್ತಮನೆ ಇದರ ೩೦ನೇ ವಾರ್ಷಿಕೋತ್ಸವ ಹಾಗೂ ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಇವರ ೧೨೫ನೇ ಜನ್ಮ ದಿನೋತ್ಸವದ ಅಂಗವಾಗಿ ತಾ. ೨೩ ರಂದು ತಾಳತ್ತಮನೆಯ ಆಟದ ಮೈದಾನದಲ್ಲಿ ಜಿಲ್ಲಾಮಟ್ಟದ ಪಂದ್ಯಾಟ ಏರ್ಪಡಿಸಲಾಗಿದೆ.
ವಾಲಿಬಾಲ್, ಥ್ರೋಬಾಲ್, ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಮ್ಯಾರಥಾನ್ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಏರ್ಪಡಿಸಲಾಗಿದೆ. ಭಾಗವಹಿಸಲು ಇಚ್ಚಿಸುವ ತಂಡಗಳು ಈ ಮೇಲ್ಕಂಡ ದಿನಾಂಕದAದು ಬೆಳಿಗ್ಗೆ ೯ ಗಂಟೆಗೆ ಹಾಜರಿರಬಹುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು ೯೪೪೯೬೩೪೬೭೯, ೯೪೮೦೭೦೫೫೮೦ ಮತ್ತು ೮೨೭೭೨೩೬೫೪೯.