ಮಡಿಕೇರಿ, ಜ. ೫: ಕಸಾಪ ವೀರಾಜಪೇಟೆ ತಾಲೂಕು ಸಮಿತಿ ರಚಿಸುವ ಕುರಿತು ಮತ್ತು ಮುಂದಿನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚಿಸಲು ತಾ. ೭ ರಂದು ಮಧ್ಯಾಹ್ನ ೩ ಗಂಟೆಗೆ ವೀರಾಜಪೇಟೆ ಪುರಭವನದಲ್ಲಿ ಕಸಾಪ ವೀರಾಜಪೇಟೆ ತಾಲೂಕು ಸದಸ್ಯರ ಸಭೆ ನಡೆಯಲಿದೆ. ಸಭೆಯಲ್ಲಿ ನೂತನ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮತ್ತು ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮುಲ್ಲೆಂಗಡ ಮಧೋಶ್ ಪೂವಯ್ಯ ಉಪಸ್ಥಿತರಿರುತ್ತಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.