ಗೋಣಿಕೊಪ್ಪಲು, ಜ. ೫: ದ.ಕೊಡಗಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹುಲಿಯ ಹಾವಳಿ ಹೆಚ್ಚಾಗಿದ್ದು ವಿವಿಧ ಭಾಗಗಳಲ್ಲಿರುವ ರೈತರ ಹಸುಗಳನ್ನು ಹುಲಿಯ ಬಾಯಿಗೆ ಆಹಾರವಾಗಿದೆ. ಇದರಿಂದಾಗಿ ಗ್ರಾಮದ ಜನರು ಆತಂಕಕ್ಕೀಡಾಗಿದ್ದು, ತಕ್ಷಣ ಹುಲಿಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಹುದಿಕೇರಿ ಹೋಬಳಿಯ ಅಧ್ಯಕ್ಷ ಚಂಗುಲAಡ ಸೂರಜ್ ಮುಂದಾಳತ್ವದಲ್ಲಿ ಜಮಾವಣೆಗೊಂಡ ಸದಸ್ಯರು ಕೂಡಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು. ಹುದಿಕೇರಿ ಪಂಚಾಯಿತಿಯ ವ್ಯಾಪ್ತಿಯಲ್ಲಿ ದಿನಂಪ್ರತಿ ಹುಲಿ ದಾಳಿಯಿಂದ ಹಸುಗಳು ಸಾವನಪ್ಪುತ್ತಿವೆ, ಅರಣ್ಯ ಇಲಾಖೆಯ ಅಧಿಕಾರಿಗಳ ವ್ಯೆಫÀಲ್ಯವೇ ಇದಕ್ಕೆಲ್ಲಾ ಕಾರಣ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆೆ.
ಗೋಣಿಕೊಪ್ಪಲು, ಜ. ೫: ದ.ಕೊಡಗಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹುಲಿಯ ಹಾವಳಿ ಹೆಚ್ಚಾಗಿದ್ದು ವಿವಿಧ ಭಾಗಗಳಲ್ಲಿರುವ ರೈತರ ಹಸುಗಳನ್ನು ಹುಲಿಯ ಬಾಯಿಗೆ ಆಹಾರವಾಗಿದೆ. ಇದರಿಂದಾಗಿ ಗ್ರಾಮದ ಜನರು ಆತಂಕಕ್ಕೀಡಾಗಿದ್ದು, ತಕ್ಷಣ ಹುಲಿಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಹುದಿಕೇರಿ ಹೋಬಳಿಯ ಅಧ್ಯಕ್ಷ ಚಂಗುಲAಡ ಸೂರಜ್ ಮುಂದಾಳತ್ವದಲ್ಲಿ ಜಮಾವಣೆಗೊಂಡ ಸದಸ್ಯರು ಕೂಡಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು. ಹುದಿಕೇರಿ ಪಂಚಾಯಿತಿಯ ವ್ಯಾಪ್ತಿಯಲ್ಲಿ ದಿನಂಪ್ರತಿ ಹುಲಿ ದಾಳಿಯಿಂದ ಹಸುಗಳು ಸಾವನಪ್ಪುತ್ತಿವೆ, ಅರಣ್ಯ ಇಲಾಖೆಯ ಅಧಿಕಾರಿಗಳ ವ್ಯೆಫÀಲ್ಯವೇ ಇದಕ್ಕೆಲ್ಲಾ ಕಾರಣ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆÉ.
ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಹುಲಿಯ ಚಲನ ವಲನದ ಬಗ್ಗೆ ಪರಿಶೀಲನೆ ನಡೆಸಿ ಹುಲಿಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ಹಿಂದಕ್ಕೆ ಪಡೆದರು. ಈ ವೇಳೆ ಪೊನ್ನಂಪೇಟೆ ವಲಯ ಅರಣ್ಯ ಅಧಿಕಾರಿ ರಾಜಪ್ಪ, ಸಿಬ್ಬಂದಿಗಳು, ರೈತ ಸಂಘದ ಪದಾಧಿಕಾರಿಗಳು ಗ್ರಾಮಸ್ಥರು ಹಾಜರಿದ್ದರು.
ಇದೇ ಸಂದರ್ಭ ಬಿಜೆಪಿ ಪಕ್ಷದ ಕೃಷಿ ಮೋರ್ಚಾದ ತಾಲೂಕು ಅಧ್ಯಕ್ಷ ಕಟ್ಟೆರ ಈಶ್ವರ ಹಾಗೂ ಮುಖಂಡರು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಿ ಹುಲಿ ಸೆರೆಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.