ಕೂಡಿಗೆ, ಜ. ೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ನಿವಾಸಿ ಕೊರೊನಾದಿಂದ ಮೃತಪಟ್ಟ ಮಂಜುನಾಥ್ ಅವರ ತಂದೆ ಮಾದೇವ ಹಾಗೂ ಕುಟುಂಬದವರ ಸಮ್ಮುಖದಲ್ಲಿ ಪತ್ನಿ ವೀಣಾ ಅವರಿಗೆ ಸರ್ಕಾರದಿಂದ ರೂ. ೧ ಲಕ್ಷ ಚೆಕ್‌ಅನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಮ್ಮ ಕಚೇರಿಯಲ್ಲಿ ವಿತರಿಸಿದರು.

ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.