ಭಾಗಮಂಡಲ, ಜ. ೫: ಭಾಗಮಂಡಲದ ಲ್ಯಾಂಪ್ಸ್ ಸಹಕಾರ ಸಂಘವು ಸದಸ್ಯರ ಸಹಕಾರದಿಂದ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೆ.ಎ. ಮಿಟ್ಟು ರಂಜಿತ್ ಹೇಳಿದರು. ಭಾಗಮಂಡಲದ ಲ್ಯಾಂಪ್ಸ್ ಸಹಕಾರ ಸಂಘದ ೨೦೨೦-೨೧ ರ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸದಸ್ಯರು ಸಂಘದಲ್ಲಿ ವ್ಯವಹಾರ ನಡೆಸಬೇಕು. ಪ್ರಸಕ್ತ ಸಾಲಿನಲ್ಲಿ ಸಂಘವು ರೂ.೧.೨೦ ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದರು.

೨೦೨೦-೨೧ ರ ಸಾಲಿನ ಆಯವ್ಯಯ ಪಟ್ಟಿಯನ್ನು ಸಂಘದ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್ ಮೋಹನ್ ಮಂಡಿಸಿದರು. ಈ ಸಂದರ್ಭ ಭಾಗಮಂಡಲ ಅರಣ್ಯ ವಲಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಧಿಕಾರಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.