ಭಾಗಮಂಡಲ, ಜ. ೫: ನಿಶಾನೆ ಮೊಟ್ಟೆಯಲ್ಲಿ ಅಕ್ರಮ ಹರಳು ಕಲ್ಲು ದಂಧೆ ನಡೆಯುತ್ತಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟ ವಾಗಿರುವ ವರದಿ ಬಗ್ಗೆ ಈಗಾಗಲೇ ಅರಣ್ಯ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ಈ ಸಂಬAಧ ಮೇಲಾಧಿಕಾರಿಗಳು ಪರಿಶೀಲನೆ ಮಾಡಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಭಾಗಮಂಡಲ ವಲಯ ಅರಣ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬAಧಿಸಿದAತೆ ಭಾಗಮಂಡಲ ವಲಯ ಅರಣ್ಯಾಧಿಕಾರಿಗಳು ತಪ್ಪಿತಸ್ಥ ಅರಣ್ಯ ರಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿರುವ ಬಗ್ಗೆ ತಿಳಿದುಬಂದಿದೆ.

ನಿಶಾನೆ ಮೊಟ್ಟೆಯಲ್ಲಿ ಅಕ್ರಮ ಹರಳು ಕಲ್ಲು ದಂಧೆ ಪ್ರಕರಣಕ್ಕೆ ಸಂಬAಧಿಸಿದAತೆ ಶಕ್ತಿ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಬಗ್ಗೆ ವಲಯ ಅರಣ್ಯಾಧಿಕಾರಿ ದೇವರಾಜು ಅವರು ವರದಿ ಮಾಡಿದ್ದರು. ಈ ಸಂಬAಧ ಇಲಾಖಾ ಸಿಬ್ಬಂದಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬAದ ಹಿನ್ನೆಲೆಯಲ್ಲಿ ಗಣಿಗಾರಿಕೆ ನಡೆದ ಜಾಗದಲ್ಲಿ ಕರ್ತವ್ಯದಲ್ಲಿದ್ದ ಉಪ ವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕ ಮತ್ತು ಅರಣ್ಯ ವೀಕ್ಷಕರು ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗಿರುವ ಸಿಬ್ಬಂದಿಗಳ ಹೆಸರು, ವಿವರಗಳನ್ನು ಸರಿಯಾಗಿ ನಮೂದಿಸದೇ ಇರುವುದು ವಲಯ ಅರಣ್ಯಾಧಿಕಾರಿಗಳ ವರದಿಯಲ್ಲಿ ಕಂಡುಬAದಿದೆ. ಕೃತ್ಯ ನಡೆದು ಇದುವರೆಗೂ ಯಾವುದೇ ಪ್ರಥಮ ಮಾಹಿತಿ ವರದಿ ಮಹಜರು ಕ್ರಮ ಜರುಗಿಸದೇ ಇರುವುದು ದಾಖಲೆಯಲ್ಲಿ ಇರುವುದರಿಂದ ವಲಯ ಅರಣ್ಯಾಧಿಕಾರಿಗಳು ಕರ್ತವ್ಯಲೋಪವೆಸಗಿರುವುದು ಕಂಡುಬAದಿದೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಕಾರಣವೇನು? ಕರ್ತವ್ಯ ಬೇಜವಾಬ್ದಾರಿಯ ಬಗ್ಗೆ ಕ್ರಮ ತೆಗೆದುಕೊಳ್ಳಲು ಮೇಲಾಧಿಕಾರಿಯವರಿಗೆ ವರದಿ ಮಾಡುತ್ತಾ, ಸೂಕ್ತ ಸಮಜಾಯಿಷಿಕೆ ನೀಡುವಂತೆ ವಲಯ ಅರಣ್ಯಾಧಿಕಾರಿಗಳಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನೋಟೀಸು ಜಾರಿ ಮಾಡಿದ್ದಾರೆ.

(ಮೊದಲ ಪುಟದಿಂದ) ಕೂಡಲೇ ಮೂಲ ದಾಖಲಾತಿಗಳೊಂದಿಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ಕ್ರಮಕ್ಕೆ ಆಗ್ರಹ

ಇದೇ ಪ್ರಕರಣಕ್ಕೆ ಸಂಬAಧಿಸಿದAತೆ ಅರಣ್ಯ ರಕ್ಷಕ ಸಚಿನ್ ಪೋಲೂರು ಅವರು ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಭಾಗಮಂಡಲ ವಲಯ ಅರಣ್ಯಾಧಿಕಾರಿ ದೇವರಾಜು ಅವರು ಉಪ ಸಂರಕ್ಷಣಾಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿದ್ದಾರೆ.

- ಸುನಿಲ್, ಸಂತೋಷ್.