ಕೂಡಿಗೆ, ಜ. ೬: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಮತ್ತು ಜಿಲ್ಲಾ ಕೃಷಿಕ ಸಮಾಜ ಮತ್ತು ಸೋಮವಾರಪೇಟೆ ತಾಲೂಕು ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೭ ರಂದು (ಇಂದು) ಜಿಲ್ಲಾಮಟ್ಟದ ರೈತರ ದಿನಾಚರಣೆ ಹಾಗೂ ತಾಂತ್ರಿಕ ಸಮಾರಂಭ ಕಾರ್ಯಕ್ರಮವು ಕೂಡಿಗೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಕೃಷಿಕ ಸಮಾಜ ಸಮಿತಿಯ ಸದಸ್ಯ ಕಾದೀರ ಉಮೇಶ್ ಪಳಂಗಪ್ಪ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ, ಮಡಿಕೇರಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಪಿ. ಪಳಂಗಪ್ಪ, ಜಿಲ್ಲಾ ಸಮಿತಿಯ ಸದಸ್ಯ ಹೆಚ್.ಕೆ. ಮಾದಪ್ಪ, ವೀರಾಜಪೇಟೆ ತಾಲೂಕಿನ ಕೃಷಿಕ ಸಮಾಜ ಅಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶಬಾನ್ ಶೇಕ್ ಮತ್ತು ಸೋಮವಾರಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಆರ್.ಕೆ. ಯಾದವ್ ಬಾಬು ಸೇರಿದಂತೆ ವಿವಿಧ ಇಲಾಖೆ ಸಹಾಯಕ ನಿರ್ದೇಶಕರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.