ಪೊನ್ನಂಪೇಟೆ, ಜ. ೬: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರೊ. ಬಿ.ಎನ್. ಶಂಕರನಾರಾಯಣ ಅವರನ್ನು ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿ ನೇಮಕ ಮಾಡಿದೆ.

ಶಂಕರನಾರಾಯಣ ಅವರು ಕಳೆದ ೩೩ ವರ್ಷಗಳಿಂದ ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಇವರು ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು.