ಸೋಮವಾರಪೇಟೆ, ಜ. ೬: ಇಲ್ಲಿನ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಹೊಸ ವರ್ಷಾರಂಭದ ಅಂಗವಾಗಿ ಛದ್ಮವೇಷ ಸ್ಪರ್ಧೆ ನಡೆಯಿತು.
ಪುಟಾಣಿಗಳು ವಿವಿಧ ವೇಷಭೂಷಣಗಳೊಂದಿಗೆ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಉಪಾಧ್ಯಕ್ಷೆ ಚಂದ್ರಿಕಾ ಕುಮಾರ್, ಶಾಲೆಯ ಭಾತ್ಮೀದಾರರಾದ ಕವಿತಾ ವಿರೂಪಾಕ್ಷ, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಮಿಲ್ಗೆçಡ್ ಗೊನ್ಸಾಲ್ವೆಸ್, ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬೀನಾ, ಶಿಕ್ಷಕಿಯರಾದ ಇಂದಿರಾ, ನಾಗವೇಣಿ ಉಪಸ್ಥಿತರಿದ್ದರು.