ಗೋಣಿಕೊಪ್ಪಲು, ಜ. ೬: ರಾಜ್ಯದಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್ ಕೇರಳ ರಾಜ್ಯದ ಗಡಿಭಾಗವಾದ ಕುಟ್ಟ ಚೆಕ್ಪೋಸ್ಟ್ಗೆ ತೆರಳಿ ಪರಿಶೀಲನೆ ನಡೆಸಿದರು.
ಕರ್ತವ್ಯದಲ್ಲಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿAದ ಮಾಹಿತಿ ಪಡೆದರು. ಕೋವಿಡ್ - ೧೯ ನಿಯಮವನ್ನು ಕಡ್ಡಾಯವಾಗಿ ಪಾಲಿಸಲು ಸ್ಪಷ್ಟ ಸೂಚನೆ ನೀಡಿದರು. ಈ ವೇಳೆ ಕುಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಾದ ಚಂದ್ರಪ್ಪ, ಸಿಬ್ಬಂದಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.