ಗೋಣಿಕೊಪ್ಪಲು, ಜ. ೬: ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ಕೋವಿಡ್-೧೯ರ ಮುಂಜಾಗ್ರತೆಯ ಕ್ರಮಗಳನ್ನು ಆರೋಗ್ಯ ಇಲಾಖೆ ತೆಗೆದುಕೊಂಡಿದೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿಧಾನಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಪರೀಕ್ಷೆಯನ್ನು ಹೆಚ್ಚು ಮಾಡಿದೆ, ಪ್ರತಿದಿನ ೧೦೦ ಗಂಟಲು ದ್ರವ ಪರೀಕ್ಷೆ ನಡೆಸಲು ಆಸ್ಪತ್ರೆಯ ಆರೋಗ್ಯ ಸಿಬ್ಬಂದಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಪಾಲಿಬೆಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಘಟಕವಾಗಿ ಪರಿವರ್ತಿಸಲಾಗಿದೆ. ಇಲ್ಲಿಗೆ ಬೇಕಾದ ಅಗತ್ಯತೆಗಳನ್ನು ಪೂರೈಸಲಾಗಿದೆ. ಹೊರ ದೇಶದಿಂದ ಬರುವವರ ಮೇಲೆ ವಿಶೇಷ ಗಮನ ಹರಿಸಲಾಗುತ್ತಿದ್ದು ಇವರುಗಳನ್ನು ಹೋಮ್ ಕ್ಯಾರೆಂಟೈನ್‌ನಲ್ಲಿ ಇರುವಂತೆ ಜಾಗ್ರತೆ ವಹಿಸಲಾಗಿದೆ.
ಗಂಟಲು ದ್ರವ ಪರೀಕ್ಷೆ ವೇಳೆ ಪಾಸಿಟಿವ್ ಪ್ರಕರಣ ಕಂಡು ಬಂದಲ್ಲಿ ಪ್ರಕರಣದ ಪ್ರಾಥಮಿಕ ಸಂಪರ್ಕದಲ್ಲಿರುವವರ ಹಾಗೂ ದ್ವಿತೀಯ ಹಂತದ ಸಂಪರ್ಕದಲ್ಲಿ ಇರುವವರನ್ನು ಕಂಡುಹಿಡಿಯಲು ಕ್ರಮ ವಹಿಸಲಾಗಿದೆ.
ಗಡಿಭಾಗವಾದ ಕುಟ್ಟ ಚೆಕ್‌ಪೋಸ್ಟ್ನಲ್ಲಿ ಕೋವಿಡ್ ಬಗ್ಗೆ ಹೆಚ್ಚಿನ ನಿಗಾವಹಿಸಲಾಗಿದೆ. ೭೨ ಗಂಟೆಯ ಮೊದಲು ಕೋವಿಡ್ ನೆಗೆಟಿವ್ ವರದಿಯನ್ನು ತೋರಿಸಿದ ವ್ಯಕ್ತಿಗೆ ಮಾತ್ರ ಗಡಿಯಲ್ಲಿ ಪ್ರವೇಶ ಮಾಡಲು ಅವಕಾಶ ನೀಡಲಾಗಿದೆ.
ನಕಲಿ ವರದಿಗಳು ಸಲ್ಲಿಕೆಯಾಗುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್ನಲ್ಲಿರುವ ಅಧಿಕಾರಿಗಳು ಆರೋಗ್ಯ ಸಿಬ್ಬಂದಿಗಳು ಮೂರು ಹಂತದಲ್ಲಿ ನೆಗೆಟಿವ್ ವರದಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ರಾತ್ರಿಯ ವೇಳೆ ಗಡಿಯಲ್ಲಿ ತಪಾಸಣೆ ಬಿಗಿಗೊಳಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ. ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ತಾಲೂಕಿನ ಟಾಸ್ಕ್ಫೋರ್ಸ್ ಸಭೆಯು ಶುಕ್ರವಾರ ನಡೆಯಲಿದ್ದು ತಾಲೂಕಿನಲ್ಲಿ ಕೋವಿಡ್‌ಗೆ ಸಂಬAಧಿಸಿದ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ. ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯ ಒಂದು ಕಟ್ಟಡವನ್ನು ಕೋವಿಡ್ ಸಂಬAಧ ಕಾಯ್ದಿರಿಸಲು ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಶಾಸಕರ ಗಮನಕ್ಕೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೋವಿಡ್ ಮೊದಲ ಲಸಿಕೆ ಪಡೆದ ನಂತರ ಎರಡನೇ ಲಸಿಕೆ ಪಡೆಯದೇ ಇರುವವರು ಕಂಡುಬAದಿದೆ. ಇವರಿಗೆ ದೂರವಾಣಿ ಕರೆ ಮಾಡಿ ಲಸಿಕೆ ಪಡೆಯಲು ಸೂಚಿಸಲಾಗುತ್ತಿದೆ. ಎಲ್ಲಾ ನಾಗರಿಕರು ಎರಡು ಲಸಿಕೆ ಹಾಕಿಕೊಳ್ಳಬೇಕು ಇದು ಸರ್ಕಾರದ ನಿಯಮವಾಗಿದೆ. ಕೋವಿಡ್ ನಿಯಂತ್ರಣ ಸಂಬAಧ ಅಗತ್ಯ ಕ್ರಮ ವಹಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್ ತಿಳಿಸಿದ್ದಾರೆ. - ಹೆಚ್.ಕೆ. ಜಗದೀಶ್