ಮಡಿಕೇರಿ, ಜ. ೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಗೋಣಿಕೊಪ್ಪದ ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷÀ್ಪರಿಣಾಮಗಳು ಹಾಗೂ ಕೋಟ್ಪಾ ೨೦೦೩ ಪರಿಣಾಮಕಾರಿ ಅನುಷ್ಠಾನ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಯಿತು.

ಈ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಯುನಿಸೆಫ್ ಮತ್ತು ಐಐಎಚ್‌ಎಂಆರ್ ಜಿಲ್ಲಾ ನಿರ್ದೇಶಕ ಡಾ. ರವೀಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮಾಜ ಕಾರ್ಯಕರ್ತ ಆರ್. ಮಂಜುನಾಥ್, ಸಿಬ್ಬಂದಿಗಳು, ಇತರರು ಇದ್ದರು.