ಸೋಮವಾರಪೇಟೆ, ಜ. ೬: ಸಮೀಪದ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿಯಲ್ಲಿ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿಯ ವತಿಯಿಂದ ರೂ. ೫೦ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಗಣಪತಿ, ಶ್ರೀ ಭಗವತಿ ಮತ್ತು ಧರ್ಮಶಾಸ್ತç ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದ್ದು, ತಾ.೮ರಂದು (ನಾಳೆ) ಪ್ರತಿಷ್ಠಾಪನೆ ಹಾಗೂ ಬ್ರಹ್ಮ ಕಲಶೋತ್ಸವ ನೆರವೇರಲಿದೆ.
ದಾನಿಗಳು, ಸರ್ಕಾರ ಮತ್ತು ಧರ್ಮಸ್ಥಳÀ ಗ್ರಾಮಾಭಿವೃದ್ದಿಯ ಯೋಜನೆ ವತಿಯಿಂದ ೫೦ ಲಕ್ಷ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಿಸ ಲಾಗಿದ್ದು, ಕೇರಳದ ಕಣ್ಣೂರು ಬ್ರಹ್ಮಶ್ರೀ ಹರಿಕೃಷ್ಣöನ್ ನಂಬೂದರಿ ಆಲಚೇರಿ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಯಿತು.
ಪ್ರತಿಷ್ಠಾಪಿಸಲ್ಪಡುವ ದೇವರ ಮೂರ್ತಿಗಳಿಗೆ ದೊಡ್ಡಮಳ್ತೆ ಶ್ರೀ ಹೊನ್ನಮ್ಮತಾಯಿ ಪುಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಮಂಗಳವಾದ್ಯದೊAದಿಗೆ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿ ದೇವಾಲಯಕ್ಕೆ ತರಲಾಯಿತು.
ಪೂಜಾ ಕಾರ್ಯಗಳಿಗೆ ಚಾಲನೆ ನೀಡಿದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಆಧ್ಯಾತ್ಮಿಕತೆಯ ತಾಯಿ ಬೇರು ಭಾರತವಾಗಿದ್ದು, ಧರ್ಮದ ತಳಹದಿಯ ಮೇಲೆ ಮಾತ್ರ ಸಾಮಾಜಿಕ ಸಮಾನತೆ ಕಾಣಲು ಸಾಧ್ಯ. ವಿವಿಧತೆಯಲ್ಲಿ ಏಕತೆ ಹಾಗೂ ಸಹಸ್ರಾರು ವರ್ಷಗಳ ಧಾರ್ಮಿಕ ಇತಿಹಾಸವಿರುವ ಭಾರತದ ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಮಾನವ ಜೀವನದ ನೆಮ್ಮದಿಗಾಗಿ ದೇವರ ಮೊರೆ ಹೋಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ದೇವಾಲಯಗಳ ನಿರ್ಮಾಣ, ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಪಿ. ಜಗನ್ನಾಥ್, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಚೌಡ್ಲು ಗ್ರಾ.ಪಂ. ಸದಸ್ಯೆ ಭವಾನಿ, ಸೋಮವಾರಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಆರ್. ಸೋಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಂತರ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾಯ ನಡೆದವು.
ಇಂದು ಮತ್ತು ನಾಳೆ ಕೂಡ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ.