ಮಡಿಕೇರಿ, ಜ. ೫: ರಿವರ್ ರ್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದುಬಾರೆ ಕಾವೇರಿ ನದಿಯಲ್ಲಿ ರ್ಯಾಫ್ಟಿಂಗ್ ನಿರ್ವಹಣೆ ಸಂಬAಧ ತಜ್ಞರ ಸಮಿತಿಯು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ರಿವರ್ ರ್ಯಾಫ್ಟಿಂಗ್ ಸಂಬAಧ ಹೆಚ್ಚುವರಿಯಾಗಿ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲಿಸಲಾಗುವುದು. ನವೀಕರಣ ಸಂಬAಧಿಸಿದAತೆ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ನಾಗರಾಜು, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಪಿ.ಚಂದನ್, ದುಬಾರೆ ರಿವರ್ ರ್ಯಾಫ್ಟಿಂಗ್ನ ವಸಂತ್ ಅವರು ರಿವರ್ ರ್ಯಾಫ್ಟಿಂಗ್ ನಿರ್ವಹಣೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.
ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ನರ್ತನ್ ಅವರು ಜಿಲ್ಲೆಯ ದುಬಾರೆಯಲ್ಲಿ ಒಟ್ಟು ೬೪ ರಿವರ್ ರ್ಯಾಫ್ಟ್ಗಳು ಕಾರ್ಯನಿರ್ವ ಹಿಸುತ್ತಿವೆ. ಈಗ ಹೆಚ್ಚುವರಿಯಾಗಿ ೩೨ ರಿವರ್ ರ್ಯಾಫ್ಟ್ ಪರವಾನಗಿಗೆ ಅರ್ಜಿ ಸಲ್ಲಿಕೆಯಾಗಿವೆ ಎಂದು ಮಾಹಿತಿ ನೀಡಿದರು. ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಬಾಲಚಂದ್ರ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವರಾಮ್, ನಂಜರಾಯ ಪಟ್ಟಣ ಪಿಡಿಒ ಇತರರು ಇದ್ದರು.